ಬೆಳಗಾವಿ:ವಿಧವೆಯ ಮೇಲೆ ಅತ್ಯಾಚಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಅನಗೋಳದಲ್ಲಿ ಓರ್ವ ಮಹಿಳೆಯ ಮೇಲೆ ಇಬ್ಬರು ಯುವಕರು ಸೇರಿಕೊಂಡು ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಸಂತ್ರಸ್ತೆಯ ದೂರಿನ ಮೇರೆಗೆ ಬೈಲಹೊಂಗಲ ತಾಲೂಕಿನ ನೇಸರಿಗಿ ಗ್ರಾಮದ ಯಲ್ಲಪ್ಪ ನಾಯಿಕ (25), ದುರ್ಗೇಶ (24) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಮೂಲತಃ ಬೆಳಗಾವಿ ನಗರದವಳಾಗಿದ್ದಾಳೆ. ಎರಡು ವರ್ಷದ ಹಿಂದೆ ಗಂಡ ತೀರಿಕೊಂಡಿದ್ದನು.
ಆರೋಪಿಗಳ ಪೈಕಿ ಒಬ್ಬನ ಜತೆ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದಳು. ಮೊಬೈಲ್​ಫೋನ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಭಾನುವಾರ ಇಬ್ಬರು ಗೆಳೆಯರು ಸೇರಿಕೊಂಡು ಈ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಸೋಮವಾರ ದೂರು ನೀಡಿದ್ದಾಳೆ. ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ ಎಂದು ಮಾರ್ಕೆಟ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಐಸ್​ಕ್ರೀಮ್​ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..

ಪತಿಯ ಕಾಲು ಕತ್ತರಿಸಿ ಪತ್ನಿಯ ಕೈಗಿಟ್ಟ ಆಸ್ಪತ್ರೆ ಸಿಬ್ಬಂದಿ; ಅದನ್ನು ವಾಪಸ್ ಪಡೆದಿದ್ದಾಗಿ ಮಿಮ್ಸ್​ ಮುಖ್ಯಸ್ಥರ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
