ಶಿವಮೊಗ್ಗ:ಲಾರಿ ಮತ್ತು ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಿಹಾಳ್-ಅರಹತೊಳಲು ಬಳಿ ಸಂಭವಿಸಿದೆ.
ಇದನ್ನೂ ಓದಿ:Swachh Bharat Mission: ದೇಶದೆಲ್ಲೆಡೆ ಪ್ರಧಾನಿ ಮೋದಿಯಿಂದ ಸ್ವಚ್ಛತಾ ಅಭಿಯಾನ
ಲಾರಿಯನ್ನು ಓವರ್​ಟೇಕ್​ ಮಾಡಲು ಹೋದ ಮೂವರಿದ್ದ ಬೈಕ್​, ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಯುವಕರು ಲಾರಿಯ ಚಕ್ರದ ಕೆಳಗೆ ಸಿಲುಕಿ, ಮೃತಪಟ್ಟಿದ್ದಾರೆ.
ಗುರುತು ಸಿಗದಂತೆ ದೇಹಗಳು ಛಿದ್ರಗೊಂಡಿದೆ. ಘಟನಾ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಭದ್ರಾವತಿ ತಾಲೂಕಿನ ಅರದೊಟ್ಲು ಗ್ರಾಮದ ಗಗನ್‌ ಅಪಘಾತಕ್ಕೆ ಸಿಲುಕಿ, ತಮ್ಮ ಕೈ-ಕಾಲು ಕಳೆದುಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:VIDEO| ಅಂತ್ಯಸಂಸ್ಕಾರ ಮುಗಿಸಿ ವಾಪಸ್​ ಆಗುವ ವೇಳೆ ಅಪಘಾತ; ದಂಪತಿ ಮೃತ್ಯು
ಕೈಮರದಿಂದ ಕಲ್ಲಿಹಾಳ್ ಕಡೆಗೆ ತೆರಳುತ್ತಿದ್ದ ಗಗನ್​ಗೆ ಎದುರಿನಿಂದ ಬರುತ್ತಿದ್ದ ಮೂವರಿದ್ದ ಬೈಕ್, ಲಾರಿ ಓವರ್‌ಟೆಕ್‌ ಮಾಡುವ ಭರದಲ್ಲಿ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣಕ್ಕೆ ಸಿಗದೆ ಲಾರಿ ಅಡಿಗೆ ಬೈಕ್​ಗಳು ಸಿಲುಕಿದ ಕಾರಣ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ.
ಅಮೆರಿಕಾದಲ್ಲಿ ‘ಲಿಯೋ’ ಕಮಾಲ್​; ರಿಲೀಸ್​ಗೂ ಮುನ್ನವೇ ದಳಪತಿ ವಿಜಯ್​ ಚಿತ್ರಕ್ಕೆ ಸಿಕ್ತು ಭರ್ಜರಿ ರೆಸ್ಪಾನ್ಸ್​!​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 19 =
Remember me
