ಬೆಂಗಳೂರು:ಕಲಬುರಗಿಯ ತೊಗರಿಬೇಳೆಯ ಎರಡು ಬ್ರ್ಯಾಂಡ್ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಭೀಮಾ ಪಲ್ಸಸ್ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಂದಿನಿ ಮಾದರಿಯಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅಮೃತ ಮಳಿಗೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ರೈತರ ಉತ್ಪನ್ನಗಳನ್ನು ಬ್ರ್ಯಾಂಡಿಂಗ್ ಮಾಡಲು 10 ಕೋಟಿ ಅನುದಾನ ಒದಗಿಸಲಾಗಿದೆ ಎಂದರು.
ಕೃಷಿ ಇಲಾಖೆಯಲ್ಲಿ ರೈತರಿಗೆ ಮಾಹಿತಿ ತಾಂತ್ರಿಕ ನೆರವಿನ ಜತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೂ ಗಮನಹರಿಸಲಾಗಿದೆ. ರೈತ ಉತ್ಪಾದಕ ಸಂಘಟನೆಗಳ ಮೂಲಕ ಮಾರಾಟಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.
ಸಿರಿಧಾನ್ಯಗಳಿಗೂ ಪ್ರೋತ್ಸಾಹ ನೀಡುವ ರೈತ ಸಿರಿ ಯೋಜನೆ ಮುಂದುವರೆಸಲಾಗಿದೆ. ದೆಹಲಿಯಲ್ಲಿ ಸೆ.9ರಂದು ನಡೆಯುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕೋಲಾರ ಮಾರ್ಗರೇಟ್, ಮಂಡ್ಯದ ರಾಣಿ ಚಂದ್ರಶೇಖರ್ ಎಂಬ ರೈತ ಮಹಿಳೆಯರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
