ಬಾಗಲಕೋಟೆ:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕೈ ಕಾರ್ಯಕರ್ತರು ಇದೀಗ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲ ವಿರುದ್ಧ ಧರಣಿ ನಡೆಸುತ್ತಿರುವ ಕಾಂಗ್ರೆಸ್​ ಕಾರ್ಯಕರ್ತರು, ಟೈರ್​ಗೆ ಬೆಂಕಿ ಹಚ್ಚಿ, ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಈ ವೇಳೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಇಬ್ಬರು ಕಾರ್ಯಕರ್ತರಿಗೆ ಪ್ರತಿಭಟನೆ ವೇಳೆ ಬೆಂಕಿ ತಗುಲಿದ್ದು, ಸುಟ್ಟ ಗಾಯಗಳಿಂದ ನರಳಾಡಿದ್ದಾರೆ.
ಇದನ್ನೂ ಓದಿ:ನಿಮಗಿದು ಗೊತ್ತೇ? ಈ ರಾಖಿಹಬ್ಬದಂದು ಅಕ್ಕ, ತಂಗಿಯರು 10 ರೂ.ಗಿಂತ ಹೆಚ್ಚು ಕೇಳಿದ್ರೆ 2 ವರ್ಷ ಜೈಲು, 10,000 ರೂ. ದಂಡ!
ಬಾದಾಮಿ ತಾಲೂಕಿನ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ ಹಾಗೂ ಬೀಳಗಿ ತಾಲೂಕಿನ ಗಿರುಸಾಗರ ಗ್ರಾಮದ ಹನಮಂತ ಗಾಯಾಳುಗಳು. ಸದ್ಯ ಇಬ್ಬರು ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಈ ದುರ್ಘಟನೆ ಸಂಭವಿಸಿದೆ.
ಟೈರ್ ಹಾಗೂ ರಾಜ್ಯಪಾಲರ ಪ್ರತಿಕೃತಿ ದಹನದ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗಲಿ, ಸುಟ್ಟ ಗಾಯಗಳಾಗಿವೆ.
ಬಿಗ್​ ಬಾಸ್​ ಸೀಸನ್​ 08ಕ್ಕೆ ರಾಜ್​ ತರುಣ್​ ಕಳಿಸಿ! ವಿವಾದದ ಬೆನ್ನಲ್ಲೇ ನಟನಿಗೆ ಫ್ಯಾನ್ಸ್​ಗಳ ಬೆಂಬಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + 19 =
Remember me
