ಬೆಂಗಳೂರು:ಅ.28ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮದ್ಯ ಸಿಗಲ್ಲ!
ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬುಧವಾರ ಮತದಾನ ನಡೆಯುತ್ತಿದೆ. ಹಾಗಾಗಿ ಈ ವ್ಯಾಪ್ತಿಯ ಹಲವು ಜಿಲ್ಲೆಗಳಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಶಾಪ್, ಎಂಎಸ್ಐಎಲ್ ಮಳಿಗೆಗಳು ಬಂದ್​ ಆಗಲಿವೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ. ಇಂದು(ಸೋಮವಾರ) ಸಂಜೆ 6 ಗಂಟೆಯಿಂದ ಬುಧವಾರ ಸಂಜೆ 6ರ ವರೆಗೆ ಈ ಆದೇಶ ಅನ್ವಯವಾಗಲಿದೆ. ಒಟ್ಟು 48 ಗಂಟೆಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಾಪ್ತಿಗೆ ಕಲಬುರಗಿ, ಬಳ್ಳಾರಿ, ಬೀದರ್​, ರಾಯಚೂರು, ಕೊಪ್ಪಳ, ಯಾದಗಿರಿ ಒಳಪಟ್ಟಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿವೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಹೊಂದಿದೆ. ಈ ಜಿಲ್ಲೆಗಳಲ್ಲಿ ಎರಡು ದಿನ ಮದ್ಯ ಸಿಗಲ್ಲ.
‘ಕನಕಪುರ ಬಂಡೆಯಲ್ಲಿ ಕ್ರಿಶ್ಚಿಯನ್ ಮೂರ್ತಿ ಸ್ಥಾಪಿಸುವಾಗ ಒಕ್ಕಲಿಗರು ನೆನಪಾಗಲಿಲ್ಲವೇ?’

ಡಿಕೆಶಿ v/s ಸಿದ್ದು! ಬೈ ಎಲೆಕ್ಷನ್​ನಲ್ಲಿ ಕಾಂಗ್ರೆಸ್​ಗೆ ಮುಳುವಾಗುತ್ತಾ ಮುಸುಕಿನ ಗುದ್ದಾಟ?

ಇಬ್ಬರು ಪತ್ನಿಯರೊಂದಿಗಿನ ಕಾಮದಾಟದ ಲೈವ್​ ದೃಶ್ಯವನ್ನೇ ಮಾರಾಟಕ್ಕಿಟ್ಟ 24ರ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
