ಬೆಂಗಳೂರು:ಗೋಡೆಯಲ್ಲಿ ರಕ್ತದ ಕಲೆ, ಬಾಯಲ್ಲಿ ರಕ್ತಸ್ರಾವ, ನೇತಾಡುತ್ತಿದ್ದ ಶವ.. ಇದು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಂಡು ಬಂದ ದೃಶ್ಯ. ಒಂದೇ ಮನೆಯಲ್ಲಿ ಒಟ್ಟು ಎರಡು ಶವ ಕಂಡುಬಂದಿದ್ದು, ಸಾವಿನ ಕಾರಣ ಇನ್ನೂ ನಿಗೂಢವಾಗಿದೆ.
72 ವರ್ಷದ ಅಜ್ಜಿಯ ಶವ ಹಾಲ್​ನಲ್ಲಿ ಪತ್ತೆಯಾಗಿದ್ದು, ಬಾಯಲ್ಲಿ ರಕ್ತಸ್ರಾವ ಉಂಟಾಗಿದೆ. ಗೋಡೆಯ‌ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಇನ್ನು ಆಕೆಯ 27 ವರ್ಷದ ಮೊಮ್ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಈಕೆಯ ಕೈಯಲ್ಲಿ ಸಹ ರಕ್ತದ ಕಲೆಗಳು ಕಂಡುಬಂದಿವೆ.
ಸಾವಿಗೀಡಾಗಿರುವ ಯುವತಿಯ ಪತಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚಿಗೆ ಆಕೆಯ ಮಗು ಸಾವಿಗೀಡಾಗಿತ್ತು. ಇದರಿಂದ ಆಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಅದಕ್ಕಾಗಿ ತವರು ಮನೆಯವರು ಕರೆ ತಂದಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಮದುವೆಯಾಗಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
