ಬಳ್ಳಾರಿ:ಜಿಲ್ಲೆಯಲ್ಲಿ ಮಹಾಮಾರಿ ಕರೊನಾಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಏಳಕ್ಕೆ ಏರಿದೆ.
ಆಂಧ್ರಪ್ರದೇಶದ ರಾಯದುರ್ಗ ಮೂಲದ 28 ವರ್ಷದ ಯುವಕ ಹಾಗೂ ಸಂಡೂರು ತಾಲೂಕು ವಡ್ಡು ಗ್ರಾಮದ 59 ವರ್ಷದ ವ್ಯಕ್ತಿ ಕರೊನಾ ಸೋಂಕಿನಿಂದ ಮೃಪಟ್ಟಿದ್ದಾರೆ. ಬೆಂಗಳೂರು ಪ್ರವಾಸದ ಹಿನ್ನೆಲೆ ಹೊಂದಿದ್ದ ರಾಯದುರ್ಗದ ಯುವಕನಿಗೆ ಉಸಿರಾಟದ ಸಮಸ್ಯೆಯಿಂದಾಗಿ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಶನ್​ನಲ್ಲಿ ಇಡಲಾಗಿತ್ತು. ಸಾವಿನ ಬಳಿಕ ಗಂಟಲು ದ್ರವ ಪಡೆದು ಪರೀಕ್ಷೆ ನಡೆಸಿದಾಗ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.ಇದನ್ನೂ ಓದಿರಿಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!
ವಡ್ಡು ಗ್ರಾಮದ 59 ವರ್ಷದ ವ್ಯಕ್ತಿಗೆ ಜೂ.20ರಂದು ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಉಸಿರಾಟದ ಸಮಸ್ಯೆ ಹಾಗೂ ನ್ಯುಮೋನಿಯಾ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಶನ್​ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಜಿಂದಾಲ್ ಕಂಪನಿಯ ಗುತ್ತಿಗೆದಾರ ನೌಕರ ಆಗಿದ್ದರು.
ಕಳೆದ ಮೂರು ದಿನಗಳಲ್ಲಿ ಕರೊನಾದಿಂದ ನಾಲ್ವರು ಮೃತಪಟ್ಟಿದ್ದಾರೆ.‌ ಸೋಂಕಿತರ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.
ಡಿಸಿ ಕಚೇರಿ ಎದುರಲ್ಲೇ ಜಿಪಂ ಸದಸ್ಯನನ್ನು ಕೊಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 7 =
Remember me
