ಶಿವಮೊಗ್ಗ:ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.
ಕಾರ್ಕಳದ ನಿಟ್ಡೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಪುನೀತ್​(38), ಬಾಲಾಜಿ(36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ಧಾರೆ.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿ 3 ದಶಕದ ಹಿಂದಿನ ಕೊಲೆ ರಹಸ್ಯ ಬಾಯ್ಬಿಟ್ಟ ಆರೋಪಿ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್​ ಕುಮಾರ್​ ಉಪನ್ಯಾಸಕರು ತಮ್ಮ ಸ್ನೇಹಿತರ ಜೊತೆಗೆ ತೀರ್ಥಹಳ್ಳಿಗೆ ಪ್ರವಾಸಕ್ಕೆಂದು ಬಂದಿದ್ದರು. ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇನಲ್ಲಿ ತಂಗಿದ್ದರು.
ಭಾನುವಾರ ಬೆಳಗ್ಗೆ ಪುನೀತ್​ ಹಾಗೂ ಬಾಲಾಜಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುವ ವೇಳೆ ಬಾಲಾಜಿ ಅವರ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಪುನೀತ್​ ಅವರ ಹಹುಡುಕಾಟದಲ್ಲಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ನಿರತರಾಗಿದ್ದಾರೆ ಎಂದು ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
