ಬೆಳಗಾವಿ:ಮಳೆಗಾಲದಲ್ಲಿ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಎಚ್ಚರ ತಪ್ಪಿದರೂ ಪ್ರಾಣಾಪಾಯಕ್ಕೆ ಒಳಗಾಗುವ ಸಾಧ್ಯತೆಗಳು ಬಹಳಷ್ಟಿವೆ. ಅಂಥದ್ದೇ ಒಂದು ಪ್ರಕರಣದಲ್ಲಿ ರೈತರಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿರೂರ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಫಕೀರಪ್ಪ ಚಂದರಗಿ (54), ಮಹಾದೇವ ಮೇತ್ರಿ (40) ವಿದ್ಯುತ್ ತಂತಿಯ ಸ್ಪರ್ಶದಿಂದ ಸಾವಿಗೀಡಾದ ರೈತರು. ವಿದ್ಯುದಾಘಾತದಿಂದಾಗಿ ಇವರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​
ಇಲ್ಲಿನ ಕಬ್ಬಿನ ಗದ್ದೆಯೊಂದರಲ್ಲಿ ಕೆಲಸ ಮಾಡುವಾಗ ರೈತರಿಬ್ಬರು ಈ ದುರಂತಕ್ಕೆ ಒಳಗಾಗಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ರಾಜ್ಯದಲ್ಲಿ ಇತ್ತೀಚೆಗೆ ಈ ಥರದ ಸಾವುಗಳು ಹೆಚ್ಚಾಗಿವೆ. ಅದರಲ್ಲೂ ಮಳೆಗಾಲದಲ್ಲಿ ಸಾರ್ವಜನಿಕರು ತುಸು ಹೆಚ್ಚೇ ಎಚ್ಚರದಿಂದ ಇರುವುದು ಒಳಿತು.
ವಿದ್ಯುತ್ ಸ್ಪರ್ಶದಿಂದಾಗಿ ‘ಜೂನಿಯರ್ ರವಿಚಂದ್ರನ್​’ ಸಾವು…
ಮರ ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಶಾಲೆಯಲ್ಲಿ ವಿದ್ಯುತ್​ ಪ್ರವಹಿಸಿ ವಿದ್ಯಾರ್ಥಿನಿ ಸಾವು: ಮುಖ್ಯಶಿಕ್ಷಕ ಅಮಾನತು
ಗೆಳತಿಯ ಮನೆಗೆಂದು ಹೊರಟಿದ್ದ ವಿದ್ಯಾರ್ಥಿನಿ ಇನ್ನಿಲ್ಲ; ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ತುಳಿದು ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
