ದಾವಣಗೆರೆ:ಇದು ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಮತ್ತೊಂದು ಪ್ರಕರಣ. ಒಂದು ಜೀವ ಉಳಿಸುವ ಪ್ರಯತ್ನದಲ್ಲಿ ಇಬ್ಬರ ಪ್ರಾಣವೂ ಹೋಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಆಲೂರು ಗ್ರಾಮದ ರಾಜು (19), ವಿಜಯ್ (19) ಮೃತಪಟ್ಟ ದುರ್ದೈವಿಗಳು. ಅಪಾಯಕ್ಕೆ ಸಿಲುಕಿದ್ದ ರಾಜುವನ್ನು ರಕ್ಷಿಸಲು ವಿಜಯ್ ಧಾವಿಸಿದ್ದು, ಬಳಿಕ ಇಬ್ಬರೂ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಕುರಿ ಕಾಯಲು ಹೋಗಿದ್ದ ಇವರು, ಬಿಸಿಲಿನ ತಾಪ ಸಹಿಸಿಕೊಳ್ಳಲಾಗದೆ ಗೊಲ್ಲರಹಟ್ಟಿ ಕೆರೆಯಲ್ಲಿ ಈಜಲು ಹೋಗಿದ್ದರು. ಈಜುವ ವೇಳೆ ಆಳವಾದ ಗುಂಡಿಯಲ್ಲಿ ಮುಳುಗುತ್ತಿದ್ದ ರಾಜುವನ್ನು ರಕ್ಷಿಸಲು ವಿಜಯ್ ಕೂಡ ಧುಮುಕಿದ್ದ. ಆದರೆ ಕೊನೆಗೆ ಇಬ್ಬರೂ ಮುಳುಗಲಾರಂಭಿಸಿದ್ದಾರೆ.
ಇದನ್ನೂ ಓದಿ:4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?
ಇವರಿಬ್ಬರನ್ನು ರಕ್ಷಿಸಲು ಬಂದ ಮತ್ತೊಬ್ಬ ಯುವಕ, ಲುಂಗಿ, ಬನಿಯನ್, ಶರ್ಟ್ ಹಗ್ಗದ ರೀತಿ ಕಟ್ಟಿ ಕೆರೆಗೆ ಎಸೆದಿದ್ದ. ಅದಾಗ್ಯೂ ರಕ್ಷಣೆಯ ಯತ್ನ ಫಲಿಸುವ ಲಕ್ಷಣ ಗೋಚರಿಸದ್ದರಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದ. ಗ್ರಾಮಸ್ಥರು ಶವಗಳನ್ನು ಹೊರತೆಗೆದಿದ್ದು, ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − fourteen =
Remember me
