ಹಾವೇರಿ:ನದಿಯ ನೀರಿನ ರಭಸಕ್ಕೆ ಹುಡುಗಿಯರಿಬ್ಬರು ಕೊಚ್ಚಿ ಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಹಿರೇಕೆರೂರು ತಾಲೂಕಿನ ಅಬಲೂರು ಗ್ರಾಮದ ನಿವಾಸಿ ಕೀರ್ತಿ ಇಂಗಳಗುಂದಿ (17) ಹಾಗೂ ಕಾಟೇನಹಳ್ಳಿ ಗ್ರಾಮದ ನಿವಾಸಿ‌ ಅಭಿಲಾಷಾ ಹಲಗೇರಿ (19) ಮೃತ ದುರ್ದೈವಿಗಳು.
ಇದನ್ನೂ ಓದಿ:ಬಾಡಿಗೆದಾರರು ಬೇಕಾಗಿದ್ದಾರೆ: ನಗರದೆಲ್ಲೆಡೆ ಟು ಲೆಟ್ ಬೋರ್ಡ್, 2 ಲಕ್ಷಕ್ಕೂ ಹೆಚ್ಚಿನ ಮನೆ ಖಾಲಿ
ಶನಿವಾರ ತಮ್ಮ ಮಾವನ ಜತೆ ಕಾರು ತೊಳೆಯಲು ನದಿಗೆ ಹೋದಾಗ ಕಾಲು ಜಾರಿ ನದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಮುಳುಗು ತಜ್ಞರ ಸಾಕಷ್ಟು ಹುಡುಕಾಟದ ಬಳಿಕ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಪತಿಯನ್ನು ಜೈಲಿಗಟ್ಟಲು ಹೋಗಿ ಸಿಕ್ಕಿಬಿದ್ದಳು: ಪೊಲೀಸ್​ ತನಿಖೆಯಲ್ಲಿ ಸ್ಪೋಟಕ ಸತ್ಯಾಂಶ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 4 =
Remember me
