ಬೆಂಗಳೂರು:ಗಮನವನ್ನು ಬೇರೆಡೆ ಸೆಳೆದು ವಾಹನಗಳಲ್ಲಿರುವ ಹಣವನ್ನು ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ 13.97 ಲಕ್ಷ ರೂ. ನಗದು ಮತ್ತು ಕೃತ್ಯಕ್ಕೆ ಉಪಯೊಗಿಸುತ್ತಿದ್ದ ಕಾರು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಚೆನ್ನೈ ಮೂಲದ ಕಾರ್ತಿಕ್ (37), ಅನುಮೋದಾಸ್(44) ಬಂಧಿತರು. ಜೂ.2 ರಂದು ಚೇತನ್ ಎಂಬುವರು ತಮ್ಮ ಟಯೋಟಾ ಇನ್ನೋವಾ ಕಾರಿನಲ್ಲಿ ಇಟ್ಟಿದ್ದ 15 ಲಕ್ಷ ರೂ. ನಗದನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ರಾಜರಾಜೇಶ್ವರಿನಗರ ಠಾಣೆಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ 13.97 ಲಕ್ಷ ರೂ. ನಗದು ಮತ್ತು ಕೃತ್ಯಕ್ಕೆ ಉಪಯೊಗಿಸುತ್ತಿದ್ದ ಎರಿಟಿಗಾ ಕಾರು, ಒಂದು ಅಪಾಚೆ ಹಾಗೂ ಒಂದು ಹೊಂಡಾ ಹಾರ್ನೆಟ್ ಮೋಟಾರ್ ಸೈಕಲ್​ಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬಿಜೆಪಿಗರ ಯಾವ ಕುತಂತ್ರವೂ ಅನ್ನಭಾಗ್ಯದ ದಾಸೋಹವನ್ನು ತಡೆಯಲು ಸಾಧ್ಯವಿಲ್ಲ: ಕಾಂಗ್ರೆಸ್​
ಆರೋಪಿಗಳು ನಗರದ ರಾಜರಾಜೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆಯೂ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಹಾಗೂ ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯು ಸಹ ಇದೇ ರೀತಿ ಕಳವು ಮಾಡಿರುವ ಬಗ್ಗೆ ತನಿಖೆಯಿಂದ ತಿಳಿದು ಬೆಳಕಿಗೆ ಬಂದಿದೆ. ಈ ಪ್ರಕರಣದ ಭಾಗಿಯಾಗಿದ್ದ ಉಳಿದ ಅರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರದಿಂದ ಸೂರ್ಯಕಾಂತಿ, ಸೋಯಾಬೀನ್‌ ಎಣ್ಣೆಯ ಆಮದು ಸುಂಕ ಕಡಿತ: ಅಡುಗೆ ಎಣ್ಣೆ ಬೆಲೆ ಇಳಿಕೆ ಸಾಧ್ಯತೆ

ಏಷ್ಯಾಕಪ್​ 2023 ವೇಳಾಪಟ್ಟಿ ಪ್ರಕಟ: 15 ವರ್ಷದ ಬಳಿಕ ಪಾಕ್​ ಆತಿಥ್ಯ, ಶತ್ರು ನೆಲದಲ್ಲಿ ಭಾರತ ಆಡಲಿದೆಯೇ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 2 =
Remember me
