ಬೆಂಗಳೂರು:ರಾಜ್ಯದಲ್ಲಿ ಕರೊನಾ ಎರಡನೇ ಅಲೆಯ ಹಾವಳಿ ಕಗ್ಗಂಟಾಗಿದ್ದು, ತೀವ್ರ ಬಿಕ್ಕಟ್ಟಿನ ಪರಿಸ್ಥಿತಿ ತಂದಿಟ್ಟಿದೆ. ಸೋಂಕಿನ ಪ್ರಮಾಣ ಮಾತ್ರವಲ್ಲದೆ, ಕರೊನಾದಿಂದಾಗಿ ಸಾವಿಗೀಡಾತ್ತಿರುವವರ ಸಂಖ್ಯೆಯೂ ತೀವ್ರಗತಿಯಲ್ಲಿ ಏರುತ್ತಿದೆ. ಈ ಮಧ್ಯೆ ಗುರುವಾರವೊಂದೇ ದಿನ ರಾಜ್ಯದಲ್ಲಿ ಇಬ್ಬರು ಪತ್ರಕರ್ತರು ಕೋವಿಡ್​-19 ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ.
ವಿಜಯಪುರ ಜಿಲ್ಲೆಯ ಪತ್ರಕರ್ತ ಜಾಫರ್ ಕಲಾದಗಿ (42) ಹಾಗೂ ಕೋಲಾರ ಜಿಲ್ಲೆಯ ಪತ್ರಕರ್ತ ಎ.ಎಂ. ವೆಂಕಟೇಶ್​ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ‘ಬಿಜಾಪುರ ಮಿರರ್’ ಇಂಗ್ಲಿಷ್ ದಿನಪತ್ರಿಕೆ ನಡೆಸುತ್ತಿದ್ದ ಜಾಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕೊನೆಯುಸಿರೆಳೆದರು.
ಬಂಗಾರಪೇಟೆ ತಾಲೂಕಿನಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್​ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಪತ್ರಕರ್ತರಿಬ್ಬರ ಆತ್ಮಕ್ಕೆ ಶಾಂತಿ ಸಿಗಲಿ, ಅವರಿಬ್ಬರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.
ಕಸ ಹಾಕುವ ಜಾಗವೇ ಮಸಣ; ಹೆಣ ಸುಡಲು ಸ್ಥಳವಿಲ್ಲದೆ ತಿಪ್ಪೆಗುಂಡಿಯಲ್ಲೇ ಅಂತ್ಯಸಂಸ್ಕಾರ!

ಕರೊನಾ ಎರಡನೇ ಅಲೆಯಲ್ಲಿ ಈ ಏಳು ರಾಜ್ಯಗಳೇ ದೊಡ್ಡ ಹಾಟ್​​ಸ್ಪಾಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
