ಚಿಕ್ಕಮಗಳೂರು:ವಿಘ್ನ ನಿವಾರಕ ಗಣೇಶನ ಮೂರ್ತಿಯನ್ನು ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್​ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.
ಮೃತರನ್ನು ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಮತ್ತು ಧನುಷ್ (17) ಎಂದು ಗುರುತಿಸಲಾಗಿದ್ದು, ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.
ಇದನ್ನೂ ಓದಿ:ಹಬ್ಬದ ದಿನದಂದೇ ದಚ್ಚುಗೆ ಸಿಕ್ತು ವಿಶೇಷ ಗಿಫ್ಟ್​​; ಆದ್ರೆ ಗಣಪನ ದರ್ಶನ ಭಾಗ್ಯ ಮಾತ್ರ ಇಲ್ಲ
ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಲಿಂಗದಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು ತಮ್ಮ ಗ್ರಾಮದಿಂದ ತರೀಕೆರೆಗೆ ಹೋಗುತ್ತಿದ್ದರು. ಭೈರಾಪುರ ಗೇಟ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್​ ಉರುಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರಿಗೂ ಗಾಯಗಳಾಗಿದ್ದು, ಹೆಚ್ಚಿನ  ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − nine =
Remember me
