ವಿಜಯಪುರ:ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲ್ಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ (36), ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಎಂದು ಗುರುತಿಸಲಾಗಿದ್ದು, ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ‌ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:ಕ್ಷುಲಕ ಕಾರಣಕ್ಕೆ ಪಂದ್ಯವನ್ನು ಕೆಲಕಾಲ ಸ್ಥಗಿತಗೊಳಿಸಿದ ಸ್ಟೀವ್​ ಸ್ಮಿತ್​; ವಿಡಿಯೋ ವೈರಲ್
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತಕ್ಕೊಳಗಾದ ಬಸ್​ಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − four =
Remember me
