ತುಮಕೂರು:ರಸ್ತೆಬದಿ ನಿಂತಿದ್ದ ಕ್ರೂಸರ್​ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಕೋರ ಬಳಿ ನಡೆದಿದೆ.
ಮೃತರನ್ನು ಗಂಗಾವತಿ ಮೂಲಕ ಕ್ರೂಸರ್​ ಚಾಲಕ ಶಂಕರ್ (35) ಹಾಗೂ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್​ (40) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಾರ್ಯಾಚರಣೆ ವೇಳೆ ಗುಂಡಿನ ದಾಳಿ; ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಪಡಿತರ ವಿತರಣಾ ಕೇಂದ್ರದ ಮಾಲೀಕರು ಬೆಂಗಳೂರು ನಗರದ ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದಗ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಕ್ರೂಸರ್​ನಲ್ಲಿ ತೆರಳುತ್ತಿದ್ದರು. ತುಮಕೂರಿನ ಕೋರ ಬಳಿ ಕ್ರೂಸರ್​ ಬಳಿ ಪಂಕ್ಚರ್​ ಆಗಿದೆ. ರಸ್ತೆ ಬದಿಯಲ್ಲಿ ಟೈಯರ್​ ಬದಲಿಸುತ್ತಿದ್ದ ವೇಳೆ ಹಿಂಬದಿಯಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೋರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
