ತುಮಕೂರು:ಬೋರ್​ವೆಲ್​ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮರತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ.
ಮಂಗಳೂರಿನ ಕಿಶನ್ ಶೆಟ್ಟಿ (20) ಹಾಗೂ ಫೀಲಿಪ್ ನೇರಿ (32) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಿಶನ್​ ಶೆಟ್ಟಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿಯಾfಗಿದ್ದು, ಫೀಲೀಪ್ ನೇರಿ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟದ ಗ್ರಾಮದ ವಾಸಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಬಿಜೆಪಿಗೆ ಮರಳಿ ಹೋಗುವ ಬಗ್ಗೆ ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ: ಜನಾರ್ದನ ರೆಡ್ಡಿ
ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಆಯೋಜನೆಗೊಂಡಿರುವ ಕಂಬಳವನ್ನು ನೋಡಿಕೊಂಡು ಉರಿಗೆ ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು,  ಲಾರಿ ಡಿಕ್ಕಿ ಹೊಡೆದ‌ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಆದಿಚುಂಚನಗಿರಿಯ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಗಾಯಾಳುಗಳ ಮೇಲೆ ನಿಗಾ ವಹಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಣಿಗಲ್​ ಠಾಣೆ ಪೊಲೀಸರು ಲಾರಿ ಹಾಗೂ ಅದರ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕುಣಿಗಲ್ ‌ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 17 =
Remember me
