ಗದಗ:ಸರ್ಕಾರಿ ಬಸ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಲಾರಿ ಚಾಲಕ ವಿನೋದ್ ಕುಮಾರ್ (38) ಹಾಗೂ ಕೊಪ್ಪಳದ ಭಾಗ್ಯನಗರದ ನಿವಾಸಿ ಗೀತಾ ಕಲಾಲ್ (40) ಎಂದು ಗುರುತಿಸಲಾಗಿದೆ. ಬಸ್​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ; ಶೆಟ್ಟರ್​ರನ್ನು ಬಿಜೆಪಿಗೆ ವಾಪಸ್​ ಕರೆತರಲು ಮುಂದಾದ ನಾಯಕರು
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕೊಪ್ಪಳದಿಂದ ಗದಗದ ಕಡೆಗೆ ಬರುತ್ತಿದ್ದ ಬಸ್ ಹಾಗೂ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಲಾರಿ ನಡುವೆ ಅಪಘಾತವಾಗಿದೆ. ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳೆ ಸಾವು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಳೆ (ಜನವರಿ 25) ಯಲ್ಲಮ್ಮನ ಗುಡ್ಡದಲ್ಲಿ ಹುಣ್ಣಿಮೆ ಪ್ರಯುಕ್ತ ದೇವಿಯ ದರ್ಶನ ಪಡೆಯಲು ಗೀತಾ ಕಲಾಲ್​ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮನೆಯಿಂದ ಹೊರಟು ಅರ್ಧ ಗಂಟೆ ಕಳೆಯುವಷ್ಟರಲ್ಲೇ ದುರ್ಘಟನೆ ಸಂಭವಿಸಿದ್ದು, ಮೃತ ಮಹಿಳೆಯ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 7 =
Remember me
