ಮೈಸೂರು:ಪಲ್ಸರ್​ ಬೈಕ್​ ಹಾಗೂ ಮಹೀಂದ್ರ ಥಾರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ KSRP ಪೊಲೀಸ್​ ಪೇದೆಗಳಿಬ್ಬರು ಅಸುನೀಗಿರುವ ಘಟನೆ ಮೈಸೂರು ಜಿಲ್ಲೆ ಸಿದ್ಧಾರ್ಥ್​ನಗರ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಂಬಾರಕೊಪ್ಪಲು ಬಡಾವಣೆ ಪಿ.ಮಹೇಶ್(23), ಬಿಜಾಪುರ ಜಿಲ್ಲೆ ಜಮಖಂಡಿ ತಾಲೂಕಿನ ಅಮರನಾಥ ತಾಳಿಕೋಟಿ (24) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ರಾಜ್ಯ ಮೀಸಲು ಪಡೆಯ 5ನೇ ಬೆಟಾಲಿಯನ್​ನಲ್ಲಿ ಈ ಇಬ್ಬರು ಪೇದೆಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ:VIDEO| ಹೊಂಚು ಹಾಕಿ ಅವಿತಿದ್ದ ಕಳ್ಳನನ್ನು ಪತ್ತೆ ಹಚ್ಚಿದ ಮಹಿಳೆ… ಮುಂದೇನಾಯ್ತು?
ಪೇದೆಗಳಿಬ್ಬರು ಊಟ ಮಾಡಲೆಂದು ಲಲಿತ್​ ಮಹಲ್​ ರಸ್ತೆಯಲ್ಲಿರುವ ಫುಡ್​ ಸ್ಟ್ರೀಟ್​ಗೆ ಬಂದಿದ್ದರು. ಊಟದ ಬಳಿಕ KSRP ಬೆಟಾಲಿಯನ್​ ಕಡೆಗೆ ವಾಪಸ್​ ಆಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಮಹೀಂದ್ರಾ ಥಾರ್​ ಡಿಕ್ಕಿ ಹೊಡೆದ ಪರಿಣಾಮ ಪೇದೆಗಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿದ್ಧಾರ್ಥನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರನೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
