ಕಲಬುರಗಿ:ಮೊನ್ನೆಯಷ್ಟೇ ತಾಯಿಯೊಬ್ಬರು ಮಕ್ಕಳಿಬ್ಬರ ಸಹಿತ ಭೀಮಾ ನದಿ ಪಾಲಾಗಿದ್ದರು. ತಮ್ಮನನ್ನು ರಕ್ಷಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ತಾಯಿ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರು. ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದ್ದು, ಭೀಮಾ ನದಿಗೆ ಇನ್ನಿಬ್ಬರು ಬಲಿಯಾಗಿದ್ದಾರೆ.
ಇದನ್ನೂ ಓದಿ:ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕೋನಹಿಪ್ಪರಗಿ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಕೋನಹಿಪ್ಪರಗಿ ಗ್ರಾಮದ ರಾಮು ದೊಡ್ಡಮನಿ (12), ದೇವು ಹೊಸಮನಿ (17) ಸಾವಿಗೀಡಾದ ಬಾಲಕರು. ಕೋನಹಿಪ್ಪರಗಿ ಬಳಿ ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಸಮೀಪ ಈ ದುರಂತ ಸಂಭವಿಸಿದೆ.
ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯದಲ್ಲಿ ಭಾರಿ ವರ್ಷಧಾರೆ: 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್; ಇಲ್ಲಿದೆ ವಿವರ…
ನೀರು ಕುಡಿಯಲೆಂದು ರಾಮು ನದಿಗೆ ಇಳಿದಿದ್ದು, ಆಗ ಪಾಚಿ ಮೇಲೆ ಕಾಲಿಟ್ಟು ಜಾರಿ ಬಿದ್ದು ಮುಳುಗಲಾರಂಭಿಸಿದ್ದ. ಆತನನ್ನು ರಕ್ಷಿಸಲು ಹೋದ ದೇವು ಕೂಡ ನೀರಿನಲ್ಲಿ ಮುಳುಗಿದ್ದಾನೆ. ಇಬ್ಬರ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 14 =
Remember me
