ದೇವನಹಳ್ಳಿ:ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವರ ಅಮಿತ್ ಷಾ ಅವರ ಕಾರ್ಯಕ್ರಮದಲ್ಲಿ ಭಾರಿ ಬದಲಾವಣೆ ಆಗಿದೆ. ಕೊನೆಯ ಕ್ಷಣದಲ್ಲಿ ಪೂರ್ವ ನಿಗದಿತ ಎರಡು ಪ್ರಮುಖ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಬೀದರ್​ನಿಂದ ನೇರವಾಗಿ ಆಗಮಿಸಿದ ಅಮಿತ್ ಷಾ ಈ ನಡುವೆ ನಾಡಪ್ರಭು ಕೆಂಪೇಗೌಡರ ಜನ್ಮಸ್ಥಳಕ್ಕೆ ಭೇಟಿ ನೀಡುವುದಿತ್ತು. ಹಾಗೆಯೇ ಚಿಕ್ಕಬಳ್ಳಾಪುರದ ಚನ್ನಕೇಶವ ದೇವಾಲಯಕ್ಕೂ ಭೇಟಿ ನೀಡುವುದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಈ ಎರಡೂ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಸಮಯದ ಅಭಾವ ಕಾರಣ ಎನ್ನಲಾಗಿದೆ.
ಇದನ್ನೂ ಓದಿ:ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ಸದ್ಯ ದೇವನಹಳ್ಳಿಯ ಜೂನಿಯರ್​ ಕಾಲೇಜು ಮೈದಾನದಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶ ನಡೆಯುತ್ತಿದ್ದು, ಅಮಿತ್ ಷಾ ಅದರಲ್ಲಿ ಉಪಸ್ಥಿತರಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಷಾ ನೇರವಾಗಿ ಸಮಾವೇಶದ ಸ್ಥಳಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ:ಗೃಹ ಸಚಿವರ ಬೆಂಗಾವಲು​ ವಾಹನ ಡಿಕ್ಕಿ, ಬೈಕ್ ಸವಾರ ಸಾವು; ಅಪಘಾತದ ಬಗ್ಗೆ ತಿಳಿದೂ ಹಾಗೇ ಹೋದ್ರಾ ಹೋಂ​ ಮಿನಿಸ್ಟರ್​?
ಕೆಂಪೇಗೌಡರ ಜನ್ಮಸ್ಥಳ ಆವತಿ ಗ್ರಾಮಕ್ಕೆ ಬಂದು ಅಲ್ಲಿ ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವುದಿದ್ದು, ಅದು ರದ್ದಾಗಿದೆ. ಷಾ ಬರಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಅಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದ್ದು, ಭಾರಿ ಕಟೌಟ್​-ಬ್ಯಾನರ್​ಗಳನ್ನು ಹಾಕಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಅನಿವಾರ್ಯವಾಗಿ ರದ್ದಾಗಿದೆ.
ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು

ಎರಡನೇ ಪತಿಯೂ ಸಾವಿಗೀಡಾದ್ದರಿಂದ ನೊಂದು ಹೆಣ್ಣುಮಕ್ಕಳಿಬ್ಬರ ಜತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − three =
Remember me
