ಮಂಡ್ಯ,ಚಿಕ್ಕಮಗಳೂರು:ಸಾಲಬಾಧೆ ತಾಳಲಾರದೆ ಮನನೊಂದು ಮಂಡ್ಯ, ಚಿಕ್ಕಮಗಳೂರಿನ ರೈತರಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹದೇವ (52) ಮೃತ ರೈತ. ಮಂಡ್ಯ ತಾಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ತನ್ನ 2 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ಮಹದೇವ. ಕೃಷಿಯಲ್ಲಿ ನಷ್ಟ ಅನುಭವಿಸಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಟೋ ಖರೀದಿಸಿ ಓಡಿಸುತ್ತಿದ್ದರು.
ಬ್ಯಾಂಕ್, ಸ್ತ್ರೀ ಶಕ್ತಿ ಸಂಘ, ಖಾಸಗಿ ವ್ಯಕ್ತಿಗಳಿಂದ 4 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದ ಮಹದೇವ, ನಿಗದಿತ ಸಮಯಕ್ಕೆ ಸಾಲ ಮರುಪಾವತಿಸದ ಹಿನ್ನೆಲೆ ಮನನೊಂದು ತನ್ನ ಆಟೋದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ( 38) ಮೃತ ದುದೈವಿ. ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ.
ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಪತ್ನಿ ರೇಣುಕಮ್ಮ ನೀಡಿದ ದೂರಿನ ಆಧಾರದಲ್ಲಿ ಯಗಟಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಶವಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:7 + 11 =
Remember me
