ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ವಿಮಾನದಲ್ಲಿ ಚಿನ್ನ ಹಾಗೂ ಡ್ರಗ್ಸ್ ಕಳ್ಳ​ಸಾಗಾಣಿಕೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಕಸ್ಟಮ್ಸ್​ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ಜರುಗಿಸಿದರೂ ಸಹ ಇಂತಹ ಘಟನೆಗಳು ಮರುಕಳಿಸುತ್ತಿವೆ.
ಇದೀಗ ಪ್ರಕರಣ ಒಂದರಲ್ಲಿ ವ್ಯಕ್ತಿಗಳಿಬ್ಬರು ಬೆಲ್ಟ್​ನೊಳಗೆ 1ಕೋಟಿ‌ 59 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಿಸುತಿದ್ದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇದನ್ನೂ ಓದಿ:ನಮ್ಮನ್ನು ಏನು ಬೇಕಾದರೂ ಕರೆಯಿರಿ ಮಿಸ್ಟರ್​ ಮೋದಿ; ಪ್ರಧಾನಿ ಹೇಳಿಕೆಗೆ ರಾಹುಲ್​ ಗಾಂಧಿ ತಿರುಗೇಟು
ಸಿಂಗಾಪುರದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರ ವ್ಯಕ್ತಿಗಳು ಅನುಮಾನಸ್ಪದವಾಗಿ ಓಡಾಡುತ್ತಿದ್ದುದ್ದನ್ನು ಕಸ್ಟಮ್ಸ್​ ಅಧಿಕಾರಿಗಳು ಮೊದಲಿಗೆ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳ ತಂಡ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಬೆಲ್ಟ್​ನಲ್ಲಿ  ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಕಸ್ಟಮ್ಸ್​ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದು, ಬಂಧಿತರಿಂದ 1ಕೋಟಿ‌ 59 ಲಕ್ಷ ರೂಪಾಯಿ ಮೌಲ್ಯದ 2 ಕೆಜಿ 610 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
