ಬೆಂಗಳೂರು:ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ಕೊಡಬೇಕು ಹಾಗೂ ಎ ಮತ್ತು ಬಿ ವರ್ಗೀಕರಣವನ್ನು ಮತ್ತೆರಡು ವರ್ಗಗಳಾಗಿ ವಿಂಗಡಿಸಬೇಕು ಎಂದು ಎಂದು ನ್ಯಾ. ಭಕ್ತವತ್ಸಲ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಇತರೆ ಹಿಂದುಳಿದ ವರ್ಗಗಳಿಗೆ ಯಾವ ಆಧಾರದಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಪ್ರಶ್ನಿಸಿ ಸದಸ್ಯರ ಆಯ್ಕೆಯನ್ನೇ ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು. ಸೂಕ್ತ ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ನೀಡುವಂತೆ ಸೂಚಿಸಿತ್ತು. ಆದ್ದರಿಂದ ರಾಜ್ಯ ಸರ್ಕಾರ ನ್ಯಾ. ಭಕ್ತವತ್ಸಲ ಸಮಿತಿ ರಚನೆ ಮಾಡಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ. ಕೆ. ಭಕ್ತವತ್ಸಲ, ಸದಸ್ಯ ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್.ಚಿಕ್ಕಮಠ ವರದಿ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ಜನರಿಗೆ ನಿಖರ ಅಂಕಿ-ಅಂಶಗಳ ಸಮೇತ ಪರಿಶೀಲನೆ ನಡೆಸಿ ರಾಜಕೀಯ ಮೀಸಲಾತಿ ನಿಗದಿ ಪಡಿಸಲು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದ ಅನ್ವಯ ಸರ್ಕಾರ ಈ ಆಯೋಗ ರಚಿಸಿತ್ತು. ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ತಲರ್ಸ³ ಅಧ್ಯಯನ ಮಾಡಿ ಆಯೋಗ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದ್ದು, ಕೆಲ ಸಲಹೆಗಳನ್ನು ನೀಡಿದೆ.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ವರ್ಗ ಎ ಮತ್ತು ವರ್ಗ ಬಿ ಅನ್ನು ಮತ್ತೆ ಎರಡು ವರ್ಗಗಳಾಗಿ ವರ್ಗೀಕರಿಸುವ ಬಗ್ಗೆ ಪರಿಶೀಲಿಸಬಹುದು ಎಂದು ವರದಿ ಹೇಳಿದೆ. 2027-2028ರಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮೊದಲು ಅಲ್ಪಸಂಖ್ಯಾತರು ಮತ್ತು ಒಬಿಸಿಗಳ ಪರಿಣಾಮಕಾರಿ ಮೀಸಲಾತಿ ಉದ್ದೇಶಕ್ಕಾಗಿ ಇದು ಅಗತ್ಯ ಎಂದು ಅಭಿಪ್ರಾಯಪಟ್ಟಿದೆ.
ಅಲ್ಪಸಂಖ್ಯಾತರು ಒಳಗೊಂಡಂತೆ ರಾಜ್ಯದ ಒಟ್ಟು ಜನಸಂಖ್ಯೆಯ ಶೇ.44.4 ರಷ್ಟು ಸಮುದಾಯಗಳನ್ನು ಒಬಿಸಿ ಒಳಗೊಂಡಿದೆ ಎಂದು ವರದಿ ಪರಿಗಣಿಸಿದೆ. ಆದರೆ ಶೇ.33 ರಷ್ಟು ಮೀಸಲಾತಿ ನೀಡಬೇಕು. ಮೀಸಲಾತಿಯ ಪ್ರಮಾಣ ಶೇ.50 ರಷ್ಟು ಮೀರಬಾರದೆಂದು ಸ್ಪಷ್ಟಪಡಿಸಿದೆ.
ಮುಸ್ಲಿಂ ಸಮುದಾಯಕ್ಕೆ ಲಾಭ:ಮುಸ್ಲಿಂ ಸಮುದಾಯವನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜಕೀಯ ಮೀಸಲಾತಿ ಲಾಭ ಪಡೆಯಲು ಸಾಧ್ಯವಾಗಿಲ್ಲ. 1996, 2001, 2010 ಮತ್ತು 2015ರಲ್ಲಿ ನಡೆದ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ದೊರೆತಿದೆ ಎಂಬ ಅಂಶವನ್ನು ಆಯೋಗ ಬಹಿರಂಗಪಡಿಸಿದೆ. ಇತರ ಹಿಂದುಳಿದ ವರ್ಗಗಳು ಇನ್ನೂ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿದಿವೆ. ಆದ್ದರಿಂದ, ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಈ ವರ್ಗಗಳ ಪರವಾಗಿ (ಅಲ್ಪಸಂಖ್ಯಾತರನ್ನು ಒಳಗೊಂಡಂತೆ) ಒಟ್ಟು ಸ್ಥಾನಗಳ 1/3 (ಶೇ.33) ಮೀಸಲಾತಿ ಒದಗಿಸುವುದು ಸಮರ್ಥನೀಯ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − ten =
Remember me
