ಕೋಲಾರ:ಬೈಕ್​ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಹೂಹಳ್ಳಿ ಗ್ರಾಮದ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಹೂಹಳ್ಳಿ ಗ್ರಾಮದ ರತ್ನಮ್ಮ (42), ವೆಂಕಟರಾಮಪ್ಪ (47) ಮೃತಪಟ್ಟಿರುತ್ತಾರೆ. ಸುರೇಶ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿಗೀಡಾದ ಇಬ್ಬರೂ ಬೈಕ್ ಸವಾರರು. ಅವರು ಹೂಹಳ್ಳಿಯಿಂದ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಶ್ರೀನಿವಾಸಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಟ ಚೇತನ್​ ವಿವಾದಾತ್ಮಕ ಹೇಳಿಕೆಗೆ ಪೇಜಾವರಶ್ರೀ ಪ್ರತಿಕ್ರಿಯೆ; ಬ್ರಾಹ್ಮಣತ್ವವನ್ನು ವ್ಯಾಖ್ಯಾನಿಸಿದ ಸ್ವಾಮೀಜಿ ಹೇಳಿದ್ದಿಷ್ಟು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 10 =
Remember me
