ಉತ್ತರಕನ್ನಡ:ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಗಂಭೀರ ಗಾಯಗೊಂಡು ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ಈ ದುರಂತ ಸಂಭವಿಸಿದ್ದು, ಬಾವಿಕೇರಿ ನಿವಾಸಿಗರಾದ ಮಧುಕರ ಸುಬ್ರಾಯ ನಾಯಕ (58), ಶಾಂತಾರಾಮ ನಾರಾಯಣ ನಾಯಕ (58) ಎಂಬವರು ಸಾವಿಗೀಡಾಗಿದ್ದಾರೆ. ಮಧುಕರ ಅವರ ಹಳೆಯ ಮನೆಯ ಗೋಡೆ ತೆರವುಗೊಳಿಸುವಾಗ ಈ ಅವಘಡ ಸಂಭವಿಸಿದೆ.
ಹಳೇಮನೆಯ ಗೋಡೆಯ ಕುಸಿದು ಮಧುಕರ ಮತ್ತು ಶಾಂತಾರಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಇಬ್ಬರೂ ಸಾವಿಗೀಡಾದರು. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಂಡ್ತಿ ಜತೆ ಜಗಳವಾಡಿ ಬಂದವನ ಕಂಡು ನಾಯಿ ಬೊಗಳಿತು; ಸಿಟ್ಟಾದ ಆತ ಅದರ ಒಡತಿಯನ್ನೇ ಕೊಂದ!

ನಾಡಿದ್ದೇ ಚಲಾವಣೆಗೆ ಬರಲಿದೆ ಡಿಜಿಟಲ್ ಕರೆನ್ಸಿ; ಪ್ರಾಯೋಗಿಕವಾಗಿ ಎಲ್ಲೆಲ್ಲಿ ಜಾರಿ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + eleven =
Remember me
