ವಿಜಯನಗರ:ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಹೊತ್ತಿಕೊಂಡ ಬೆಂಕಿಯನ್ನು ಆರಿಸಲು ಬಂದ ಸಂದರ್ಭದಲ್ಲೇ ಅಲ್ಲಿದ್ದ ಸಿಲಿಂಡರ್​ ಸ್ಫೋಟಗೊಂಡಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ.
ಶಿವಪ್ಪ (28) ಹಾಗೂ ಶ್ರೀಕಾಂತ್ (23) ಸಾವಿಗೀಡಾದವರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಬಳಿಯ ಸಂಕ್ಲಾಪುರ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಇಲ್ಲಿನ ಮೊಂಡ ಬೋರಯ್ಯ ಎಂಬವರ ಎಗ್​ರೈಸ್ ಅಂಗಡಿಯಲ್ಲಿ ಶಾರ್ಟ್​​ ಸರ್ಕ್ಯೂಟ್ ಸಂಭವಿಸಿತ್ತು.
ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿಕೊಂಡಿದ್ದ ಬೆಂಕಿ ಆರಿಸಲು ಎಂದು ಶಿವಪ್ಪ ಮತ್ತು ಶ್ರೀಕಾಂತ್ ಧಾವಿಸಿದ್ದರು. ಹೀಗೆ ಬೆಂಕಿಯನ್ನು ಆರಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲೇ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಇಬ್ಬರ ದೇಹಗಳು ಛಿದ್ರಗೊಂಡಿವೆ. ಸ್ಥಳಕ್ಕೆ ಗುಡಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಇಳಿಕೆ; ಅದಕ್ಕೆ ಕಾರಣ ಮೋದಿ ಸರ್ಕಾರದ ಇದೊಂದು ಕ್ರಮ..

ಪ್ರವಾದಿ ಮುಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ; ವಕ್ತಾರರಿಬ್ಬರನ್ನು ಅಮಾನತುಗೊಳಿಸಿದ ಬಿಜೆಪಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 4 =
Remember me
