ಕೋಲಾರ:ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​​ಎಸ್ಎಸ್​) ಮುಖಂಡನ ಮುಖಕ್ಕೆ ಅನ್ಯಕೋಮಿನ ಇಬ್ಬರು ಚಾಕು ಇರಿದ ಪ್ರಕರಣವೊಂದು ಹಾಡಹಗಲೇ ನಡೆದಿದೆ. ಕೋಲಾರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಆರ್​ಎಸ್ಎಸ್​ ಮುಖಂಡ ರವಿ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಮಾರಿಕಾಂಬ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ರವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ರವಿಗೆ ಕಿವಿಯ ಭಾಗದಲ್ಲಿ ಗಾಯವಾಗಿದೆ.
ರವಿ ಮಾಲೀಕತ್ವದ ಸ್ಟೀಲ್ ಅಂಗಡಿ ಮುಂದೆ ಇಂದು ಮಧ್ಯಾಹ್ನ ಬೈಕ್ ಟಚ್ ಆಗಿದ್ದಕ್ಕೆ ಗಲಾಟೆ‌ ನಡೆಯುತಿತ್ತು. ಆ ಸಂದರ್ಭದಲ್ಲಿ ರವಿ ಗಲಾಟೆ ಬಿಡಿಸಲು ಹೋಗಿದ್ದು, ಆಗ ಅನ್ಯಕೋಮಿನ ಇಬ್ಬರು ರವಿಯ ಮುಖಕ್ಕೆ ಚಾಕು ಹಾಕಿದ್ದಾರೆ. ಚಾಕು ಇರಿದಿದ್ದನ್ನು ಖಂಡಿಸಿ ಮಾಲೂರು ಬಸ್ ನಿಲ್ದಾಣದಲ್ಲಿ ಆರ್​ಎಸ್​ಎಸ್​ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಾಕು ಇರಿದವರು ಗಾಂಜಾ ಸೇವಿಸಿದ್ದು, ಗಲಾಟೆ ಬಿಡಿಸಿ ವಾಪಸ್ ಆಗುವಾಗ ಅವರು ಚಾಕು ಇರಿದಿದ್ದರು. ಆರೋಪಿಗಳಲ್ಲಿ ಒಬ್ಬ ಆಟೋ ಚಾಲಕನಾಗಿದ್ದು, ಇನ್ನೊಬ್ಬ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುವವರನಾಗಿದ್ದಾನೆ. ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಸದ್ಯ ಮಾಲೂರು ಪೊಲೀಸ್ ಠಾಣೆ ಬಳಿ ಆರ್​ಎಸ್​ಎಸ್​ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.
ನಿಮ್ಮೂರಿಗೀಗ ಅವರಲ್ಲ, ಇವರೇ ಇನ್​ಸ್ಪೆಕ್ಟರ್​; 13 ಡಿವೈಎಸ್​ಪಿಗಳೂ ಟ್ರಾನ್ಸ್​ಫರ್​..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 12 =
Remember me
