ಶಿವಮೊಗ್ಗ:ಮಕರ ಸಂಕ್ರಾಂತಿ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಹೋರಿ ಹಬ್ಬದಲ್ಲಿ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಮತ್ತು ಶಿಕಾರಿಪುರ ತಾಲೂಕಿನ ಆವನಟ್ಟಿ ಸಮೀಪದ ಮಾಳ್ಳೂರು ಗ್ರಾಮದಲ್ಲಿ ಸಂಭವಿಸಿದ ಪ್ರತ್ಯೇಕ ಅವಘಡದಲ್ಲಿ ಶಿವಮೊಗ್ಗ ಆಲ್ಕೊಳದ ನಿವಾಸಿ ಲೋಕೇಶ್ (32) ಮತ್ತು ಮಾಳ್ಳೂರು ಗ್ರಾಮದ ರಂಗನಾಥ (24) ಎಂಬುವರು ಮೃತಪಟ್ಟಿದ್ದಾರೆ. ಹೋರಿಗಳ ಕಾಲಡಿ ಸಿಲುಕಿ ಆರು ಮಂದಿ ಗಾಯಗೊಂಡಿದ್ದಾರೆ.
ಜ.14ರಂದು ಮಳ್ಳೂರಿನಲ್ಲಿ ನಡೆದಿದ್ದ ಹೋರಿ ಹಬ್ಬದಲ್ಲಿ ರಂಗನಾಥ್ ಗಂಭೀರವಾಗಿ ಗಾಯಗೊಂಡಿದ್ದ. ಶಿಕಾರಿಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಗೆ ಹೊಲಿಗೆ ಹಾಕಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗಿನ ಜಾವ ರಂಗನಾಥ್ ಮೃತಪಟ್ಟಿದ್ದಾರೆ. ಆನವಟ್ಟಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಭಾನುವಾರ ಬೆಳಗ್ಗೆ ಸಂಕ್ರಾಂತಿ ನಿಮಿತ್ತ ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಲೋಕೇಶ್ ಅವರ ಎದೆಗೆ ಹೋರಿ ತಿವಿದಿತ್ತು. ಮೆಗ್ಗಾನ್ ಆಸ್ಪತ್ರೆಗೆ ಕರೆತಂದರೂ ಲೋಕೇಶ್ ಬದುಕುಳಿದಿಲ್ಲ. ಕೊನಗವಳ್ಳಿಯ ಹೋರಿ ಹಬ್ಬದ ಆಯೋಜಕರ ಮೇಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮರಣೋತ್ತರ ಪರೀಕ್ಷಾ ಕೇಂದ್ರದ ಬಳಿ ಪ್ರತಿಭಟನೆ:ಹೋರಿ ಹಬ್ಬ ನಿಷೇಧವಿದ್ದರೂ ಅಲ್ಲಲ್ಲಿ ಸ್ಪರ್ಧೆಗಳು ನಡೆದು ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಆಯೋಜಕರ ಮೇಲೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮೆಗ್ಗಾನ್ ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಎದುರೇ ಡಿಎಸ್‌ಎಸ್‌ನ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಹಲವರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಆಗ್ರಹಿಸಿ ಧರಣಿಗೆ ಕುಳಿತರು. ಪ್ರತಿ ವರ್ಷ 25 ಜನ ಹೋರಿ ಹಬ್ಬಕ್ಕೆ ಬಲಿಯಾಗುತ್ತಿದ್ದಾರೆ. ಈ ಹಬ್ಬ ಬೇಕಾ? ಎಂದು ಪ್ರಶ್ನೆ ಮಾಡಿದರು. ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಆಗಮಿಸಿ ಪ್ರತಿಭಟನಾಕಾರರ ಜತೆ ಸಮಾಲೋಚನೆ ನಡೆಸಿದರು. ಜತೆಗೆ ಮೃತರ ಸಂಬಂಧಿಕರಿಗೆ ಸಾಂತ್ವಾನ ಹೇಳಿದರು.
9ನೇ ತರಗತಿ ವಿದ್ಯಾರ್ಥಿನಿ ಜತೆ ಬೆಳಗಾವಿಯಲ್ಲಿ ಶಿಕ್ಷಕನ ಪ್ರೇಮದಾಟ: ಖಾಸಗಿ ವಿಡಿಯೋ ವೈರಲ್​

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
