
ಕೊಪ್ಪಳ:ಜಿಲ್ಲೆಯ ಕುಕನೂರು ತಾಲೂಕಿನ ತೊಂಡಿಹಾಳ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಪೇದಗಳಿಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಶವವಾಗಿ ಸಿಕ್ಕ ಪೇದೆಯನ್ನು ಮುಂಡರಗಿ ತಾಲೂಕಿನ ನಾಗರಳ್ಳಿ ಗ್ರಾಮದ ನಿಂಗಪ್ಪ ಹಲವಾಗಲಿ ಎಂದು ಗುರುತಿಸಲಾಗಿದೆ.
ಇವರು ಸಹೋದ್ಯೋಗಿ ಮಹೇಶ ಎಂಬಾತನೊಂದಿಗೆ ಗಜೇಂದ್ರಗಡದಲ್ಲಿ ಗಣೇಶ ಚತುರ್ಥಿಯ ಬಂದೋಬಸ್ತ್​​ಗೆ ತೆರಳಿದ್ದರು. ಸೋಮವಾರ ಕರ್ತವ್ಯ ಮುಗಿಸಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ. ಇಬ್ಬರು ಪೇದೆಗಳ ಮೊಬೈಲ್​ಫೋನ್​ ಜಿಪಿಎಸ್ ಲೊಕೇಷನ್ ಹಳ್ಳದ ಬಳಿ ತೋರಿಸಿದ ಕಾರಣ ನೀರಿನಲ್ಲಿ ಕೊಚ್ಚಿ ಹೋದ ಶಂಕೆ ವ್ಯಕ್ತವಾಗಿತ್ತು. ಇದೇ ಸುಳಿವು ಹಿಡಿದುಕೊಂಡ ಪೊಲೀಸರು ಅಗ್ನಿಶಾಮಕದಳ ಸಿಬ್ಬಂದಿಯೊಂದಿಗೆ ಹಳ್ಳದಲ್ಲಿ ಪೇದೆಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೊಲೀಸರ ಅನುಮಾನ ನಿಜವಾಗಿದ್ದು, ನಿಂಗಪ್ಪ ಮೃತದೇಹ ಪತ್ತೆಯಾಗಿದೆ. ಸೇತುವೆಯಿಂದ ನಾಲ್ಕು ಕಿ.ಮೀ. ದೂರದಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕುಟುಂಬದವರು ಆಗಮಿಸಿದ್ದು, ಇನ್ನೊಬ್ಬ ಪೇದೆ ಮಹೇಶ್​ಗಾಗಿ ಹುಡುಕಾಟ ಮುಂದುವರಿದಿದೆ. ಸ್ಥಳಕ್ಕೆ ಗದಗ, ಕೊಪ್ಪಳ ಎಸ್ಪಿ ಸೇರಿದಂತೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಪತಿಯ ಕಾಲನ್ನು ಕತ್ತರಿಸಿ ಪತ್ನಿಯ ಕೈಗಿಟ್ರು ಆಸ್ಪತ್ರೆ ಸಿಬ್ಬಂದಿ!; ತಬ್ಬಿಬ್ಬಾದ ಮಹಿಳೆ..
ನಿದ್ರೆ ಬರುತ್ತಿಲ್ಲ ಎಂದು ಬೇಸತ್ತು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:1 × two =
Remember me
