ತುಮಕೂರು:ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪ ಮೇಲೆ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಿ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:1 ಲಕ್ಷ ರೂ. ಬೇಕಂತೆ! ವಿಡಿಯೋ ರೆಕಾರ್ಡ್​ ಮಾಡಿದ್ದಕ್ಕೆ ಮಹಿಳಾ ಅಧಿಕಾರಿಯಿಂದ ಅನುಚಿತ ವರ್ತನೆ
ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ, ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ಲಾರಿಯಿಂದ 200, 300 ರೂಪಾಯಿ ವಸೂಲಿ ಮಾಡುತ್ತಿದ್ದರು. ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಲಂಚಬಾಕತನವನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.
ಹಣ ವಸೂಲಿ ಪ್ರಕರಣ ತಮ್ಮ ಗಮನಕ್ಕೆ ಬರುತ್ತಿದ್ದಂತೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್​ಪೆಕ್ಟರ್​ಗೆ ತುಮಕೂರು ಎಸ್ಪಿ ಸೂಚನೆ ನೀಡಿದ್ದರು. ವರದಿಯಲ್ಲಿ ಪೊಲೀಸರು ಹಣ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಎಎಸ್​ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಉತ್ತರಮೇರೂರ; ಸ್ವಯಂ ಆಡಳಿತದ ಬೇರು

ಡ್ರಗ್ಸ್ ದಂಧೆಗೆ ಖಾಕಿ ಖೆಡ್ಡಾ; ಗಡಿ ಚೆಕ್​ಪೋಸ್ಟ್​ಗಳಲ್ಲಿ ನಿಗಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + eighteen =
Remember me
