ಹಾಸನ:ಒಂದು ವರ್ಷದ ಅಂತರದಲ್ಲಿ ಅದೇ ಜಾಗದಲ್ಲಿ ಸಂಬಂಧಿಕರಿಬ್ಬರು ಒಂದೇ ಥರದಲ್ಲಿ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.
ರಂಗಮ್ಮ (60) ಎಂಬವರು ಸಾವಿಗೀಡಾದ ಮಹಿಳೆ. ಇವರು ಮೃತಪಟ್ಟ ಸ್ಥಳದಲ್ಲೇ ಒಂದು ವರ್ಷದ ಹಿಂದೆ ಇವರ ಬಾಮೈದ ಯಜಮಾನ್ ಗೌಡ ಎಂಬವರೂ ಇವರು ಸತ್ತ ರೀತಿಯಲ್ಲೇ ಸಾವಿಗೀಡಾಗಿದ್ದರು. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ರಂಗಮ್ಮ ಸಾವಿಗೀಡಾಗಿದ್ದು, ಅವರೊಂದಿಗಿದ್ದ ಹಸು ಕೂಡ ಮೃತಪಟ್ಟಿದೆ.
ಇವರು ಹಸು ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾರಿ ಗಾಳಿ-ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ರಂಗಮ್ಮ ಅದರ ಮೇಲೆ ಕಾಲಿಟ್ಟಿದ್ದರಿಂದ ವಿದ್ಯುತ್​ ಶಾಕ್ ತಗುಲಿ ಸ್ಥಳದಲ್ಲೇ ಸಾವಿಗೀಡಾದರು.
ಇದನ್ನೂ ಓದಿ:ಪ್ರೀತಿಸಿ ಮನೆ ಬಿಟ್ಟು ಹೋಗಿ ಮದ್ವೆಯಾದ ಮಗಳು; ನೊಂದು ಪ್ರಾಣ ಕಳ್ಕೊಂಡ ತಾಯಿ!
ಒಂದು ವರ್ಷದ ಹಿಂದೆ ಅದೇ ಜಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಯಜಮಾನ್ ಗೌಡ ಸಾವಿಗೀಡಾಗಿದ್ದರು. ಅದೇ ಜಾಗದಲ್ಲಿದ್ದ ತಂತಿ ಬೀಳುವಂತಿದೆ, ದುರಸ್ತಿ ಮಾಡಿ ಎಂದು ಒಂದು ತಿಂಗಳಿನಿಂದ ಚೆಸ್ಕಾಂ ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸಿಲ್ಲ ಎಂದು ಬಳ್ಳೂರು ಗ್ರಾಮಸ್ಥರು ಆರೋಪಿಸಿದ್ದಾರೆ.
ಚೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿಯೇ ಮಹಿಳೆ ಮತ್ತು ಹಸು ಬಲಿಯಾಗುವಂತಾಗಿದೆ. ಬೇಜವಾಬ್ದಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು, ರಂಗಮ್ಮ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮಾತ್ರವಲ್ಲ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಬರುವವರೆಗೂ ಶವ ಮೇಲೆತ್ತುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸದಿಯಿಂದ ಇದ್ದಕ್ಕಿದ್ದಂತೆ ಜೈನಮುನಿ ನಾಪತ್ತೆ; ಭಕ್ತರಲ್ಲಿ ಆತಂಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − three =
Remember me
