ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಕಸದ ವಾಹನಕ್ಕೆ ಜನರು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂಥ ವಾಹನಗಳಿಗೆ ಹಲವರು ಬಲಿಯಾಗಿದ್ದು, ಇಂದು ಬಿಬಿಎಂಪಿ ಕಸದ ಲಾರಿಯೊಂದು ಇಬ್ಬರ ಸಾವಿಗೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಸದ ಲಾರಿ ಬೈಕ್​ಗೆ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಲಾರಿ ತ್ಯಾಜ್ಯ ಸುರಿಯಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಈ ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಲು ಯತ್ನಿಸಿದ್ದ. ಆದರೆ ಸಾರ್ವಜನಿಕರು ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗೆ ಅಂದರೆ ಎರಡು ತಿಂಗಳ ಹಿಂದೆಯೂ ಕಸದ ಲಾರಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದ. ಹೀಗಾಗಿ ಇಂದು ಮತ್ತೆ ಕಸದ ಲಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ನೀರಿಗೆ ಬಿತ್ತು ಪ್ರಪೋಸ್ ಮಾಡಲೆಂದು ತಂದ ಉಂಗುರ; ಸಮುದ್ರಕ್ಕೇ ಧುಮುಕಿದ ಪ್ರಿಯಕರ: ಆಮೇಲೇನಾಯ್ತು!

ಮಗಳ ಮದುವೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ನೇಣು ಹಾಕಿಕೊಂಡ ತಂದೆ; ಮದ್ಯಪಾನ ಮಾಡಿದ್ದಕ್ಕೆ ಬೈದಿದ್ದೇ ಕಾರಣ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:16 − thirteen =
Remember me
