ರಾಮನಗರ:ಟ್ಯೂಷನ್​ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ಮರಳುತ್ತಿದ್ದ ಮಕ್ಕಳಿಬ್ಬರು ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಐದು ಹಾಗೂ ಎಂಟು ವರ್ಷದ ಮಕ್ಕಳಿಬ್ಬರು ಅನ್ಯಾಯವಾಗಿ ಸಾವಿಗೀಡಾದ ಈ ಪ್ರಕರಣ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ರೋಹಿತ್ (5), ಶಾಲಿನಿ (8) ಸಾವಿಗೀಡಾದ ಮಕ್ಕಳು. ಸುಚಿತ್, ಗೌತಮಿ, ಲೇಖನ ಎಂಬ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್; ರಾಹುಲ್ ಗಾಂಧಿ ವಿರುದ್ಧ ಶೋಭಾ ಕರಂದ್ಲಾಜೆ ದೂರು
ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಈ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಸಾವು-ನೋವುಗಳು ಉಂಟಾಗಿವೆ. ಗಾಯಗೊಂಡ ಮಕ್ಕಳನ್ನು ರಾಮನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಉಳಿದ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ:ಟಾಯ್ಲೆಟ್‌ನಿಂದ ಹೊರಹೊಮ್ಮಿದ ಹೊಗೆಯಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲೇ ನಿಂತಿತು!
ಮಕ್ಕಳಿಗೆ ಗುದ್ದಿದ ಬಳಿಕವೂ ಚಾಲಕ ಗೂಡ್ಸ್​ ವಾಹನ ಸಮೇತ ಪರಾರಿಯಾಗಿದ್ದ. ಆದರೆ ಬಳಿಕ ಬೇರೆಡೆ ವಾಹನ ನಿಲ್ಲಿಸಿ ತಲೆಮರೆಸಿಕೊಂಡಿದ್ದಾನೆ. ಆಸ್ಪತ್ರೆಗೆ ಎಎಸ್​​ಪಿ ಸುರೇಶ್ ಭೇಟಿ ನೀಡಿದ್ದು, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!

ಹೃದಯಾಘಾತಕ್ಕೆ ಮತ್ತೊಂದು ಬಲಿ: 15 ವರ್ಷದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:six + thirteen =
Remember me
