ಬೆಂಗಳೂರು:ಪ್ರೀತಿಸುತ್ತಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿ ಇಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರೀತಿಯೊಂದು ರೈಲ್ವೇ ಹಳಿಯಲ್ಲಿ ಅಂತ್ಯಗೊಂಡಿದೆ. ಸಾವಿಗೀಡಾದ ಇಬ್ಬರೂ ಬೆಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಗಳು.
ಚೈತನ್ಯ (19) ಮತ್ತು ಸಿರೀಶ್​ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರು ಬೆಂಗಳೂರಿನ ಈಸ್ಟ್​ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನು ಹಾಗೂ ವಿದ್ಯಾರ್ಥಿಗಳು ಎಲ್ಲಿಯವರು ಎಂಬ ಕುರಿತು ನಿಖರವಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್​ ಬಳಿ ಟ್ರ್ಯಾಕ್​ಗೆ ತಲೆ ಕೊಟ್ಟಿದ್ದಾರೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಯೋಗಿ ಆದಿತ್ಯನಾಥ್​ ಪ್ರಮಾಣವಚನ: ದೇಶದಲ್ಲೀಗ ಐವರು ‘ಅಂಡರ್​ 50 ಸಿಎಂ’!

ರಾಮ್​ಗೋಪಾಲ್ ವರ್ಮಾ ಜತೆ ಅಂಡರ್​ವರ್ಲ್ಡ್​​ನಲ್ಲಿ ಉಪೇಂದ್ರ; ಯಾರದು ‘R’?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + five =
Remember me
