ಬಾಗಲಕೋಟೆ:ಶಾಲೆಯಿಂದ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಸಮೀಪದ ಕ್ಯಾದಿಗೇರಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ತರಗತಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಉಂಟಾಗಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿನಿಯರಾದ ನೇತ್ರಾವತಿ ರಗಟಿ ‌‌(14), ಅಂಜಲಿ ಸೂಡಿ (14) ಸಾವಿಗೀಡಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳು ಐಹೊಳೆಯಿಂದ ಚಿಲ್ಲಾಪುರಕ್ಕೆ ಹೊರಟಿದ್ದರು. ಆಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಕಾರು ಈ ದುರಂತಕ್ಕೆ ಕಾರಣವಾಗಿದೆ. ಕೆಎ 29 ಎನ್ 9146 ನೋಂದಣಿ ಸಂಖ್ಯೆಯ ಈ ಕಾರು ಸಂತೋಷ ಅಮರಿ ಎಂಬವರ ಹೆಸರಿನಲ್ಲಿದೆ.
ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಹೊಳೆ ಪ್ರವಾಸದಲ್ಲಿರುವ ತೋಟಗಾರಿಕೆ ಸಚಿವ ಮುನಿರತ್ನ ಕೂಡ ಸ್ಥಳಕ್ಕೆ ತೆರಳಿದ್ದಾರೆ.
ಎಸ್ಎಸ್ಎಲ್​ಸಿ ವಿದ್ಯಾರ್ಥಿ-ಪಾಲಕರ ಪರದಾಟ; ಆಗಿದ್ದೇನು?
ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ; ಹತ್ತು ಆರೋಪಿಗಳ ಬಂಧನ: ಈ ಬಗ್ಗೆ ವಾರಗಳ ಹಿಂದೆಯೇ ಗಮನ ಸೆಳೆದಿತ್ತು ವಿಜಯವಾಣಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + ten =
Remember me
