ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಇರುವ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ವಿಷಯ ತಡವಾಗಿ ಹೊರಬಿದ್ದಿದೆ.
ಇಂಡಿಯನ್​ ಇನ್​​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ರಣಧೀರ್ ಕುಮಾರ್​ (36) ಮತ್ತು ರಾಹುಲ್ ಪ್ರತಾಪ್​ (31) ಮೃತಪಟ್ಟವರು. ಇದರಲ್ಲಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ಅನಾರೋಗ್ಯಗೊಂಡು ಕೊನೆಯುಸಿರೆಳೆದಿದ್ದಾನೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಐಎಸ್​ಸಿಯಲ್ಲಿ ರಣಧೀರ ಕುಮಾರ್​ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ರಾಹುಲ್ ಪ್ರತಾಪ್ ಎಂ.ಟೆಕ್ ವಿದ್ಯಾರ್ಥಿಯಾಗಿದ್ದ. ರಣಧೀರ ಕುಮಾರ್ ತಾನಿದ್ದ ರೂಮ್​ನಲ್ಲೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಇನ್ನು ರಾಹುಲ್ ಪ್ರತಾಪ್ ಫುಟ್​​ಬಾಲ್​ ಆಡುವಾಗ ಪಲ್ಸ್ ರೇಟ್​ ಕಡಿಮೆಯಾಗಿ ಮೃತಪಟ್ಟಿದ್ದಾನೆ. ಇಬ್ಬರೂ ವಿದ್ಯಾರ್ಥಿಗಳ ಹೆಚ್ಚಿನ ವಿವರ ಇನ್ನಷ್ಟೇ ಹೊರಬೀಳಬೇಕಿದೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಹೃದಯವೇ ಬಾಯಿಗೆ ಬಂದಂತಾಗಿತ್ತು; ನಟಿ ಪಾರುಲ್ ಯಾದವ್​ಗೆ ಅಷ್ಟು ಭಯವಾಗಿದ್ದೇಕೆ?

ಆ್ಯಸಿಡ್ ದಾಳಿಯಿಂದಾಗಿ ಕಣ್ಣು ಕಳೆದುಕೊಂಡಳು, ರೂಪ ಕಳೆದುಕೊಂಡಳು; ಆದ್ರೂ ಮದುವೆ ಆಗಲು ಹುಡುಗ ಸಿಕ್ಕಿದ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:3 + three =
Remember me
