ಕೊಪ್ಪಳ:ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ದೊಡ್ಡ ಉರುಳಾಗಿ ಪರಿಣಮಿಸಿರುವ ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಗಳ ನಡುವೆಯೇ ಇದೀಗ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ಅಕ್ರಮ ನಡೆದಿದೆಯಾ ಎಂಬ ಅನುಮಾನ ಮೂಡಲು ಶುರುವಾಗಿದೆ. ಕೊಪ್ಪಳದ ಅಂಗನವಾಡಿ ಒಂದರಲ್ಲಿ ಮಕ್ಕಳ ತಟ್ಟೆಗೆ ಹಾಕಿದ್ದ ಮೊಟ್ಟೆಯನ್ನು ವಾಪಸ್​ ಕಸಿದುಕೊಂಡಿರುವುದು ಸಾವರ್ಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್‌ ಕಸಿದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಪ್ರಾಮಾಣಿಕತೆ ಗೆಲ್ಲಲು 17 ತಿಂಗಳು ಬೇಕಾಯಿತು, ಅವರು ನನಗೆ ದೇವರಿದ್ದಂತೆ: ಮನೀಶ್​ ಸಿಸೋಡಿಯಾ
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕುತ್ತಿರುವ ವಿಡಿಯೋವನ್ನು ಮಾಡಿಕೊಂಡು ಮೇಲಧಿಕಾರಿಗಳಿಗೆ ಕಳುಹಿಸುತ್ತಾರೆ. ವಿಡಿಯೋ ಕಳುಹಿಸುತ್ತಿದ್ದಂತೆ ಸಹಾಯಕಿ ಶೈನಜಾಬೇಗಂ ಮಕ್ಕಳ ತಟ್ಟೆಯಿಂದ ಮೊಟ್ಟೆಯನ್ನು ವಾಪಸ್​ ತೆಗೆದುಕೊಳ್ಳುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋ ದಲ್ಲಿ ನೋಡಬಹುದಾಗಿದೆ.
ಇತ್ತ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಂಡೂರಿನ ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಯನ್ನು ಮಕ್ಕಳ ತಟ್ಟೆಗೆ ಹಾಕಿ ಬಳಿಕ ವಾಪಸ್‌ ಪಡೆದು ದುರಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
