ಮೈಸೂರು:ಎಲೆ ತೋಟದ ಬಳಿ ಭಾನುವಾರ ತಡರಾತ್ರಿ ಜೋಡಿ ಕೊಲೆಯಾಗಿದ್ದು, ಮತ್ತೊಬ್ಬನ ಮೇಲೂ ಮಾರಣಾಂತಿಕ ಹಲ್ಲೆ ನಡೆದಿದೆ.
ಮೈಸೂರಿನ ಗೌರಿಶಂಕರ ನಗರದ ನಿವಾಸಿಗಳಾದ ಕಿರಣ್ (29) ಮತ್ತು ಕಿಶನ್ (29) ಬರ್ಬರವಾಗಿ ಕೊಲೆಯಾದವರು. ಈ ಘಟನೆಯಲ್ಲಿ ಮಧು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿರಿಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!
ಆಸ್ತಿ ವಿಚಾರ ಮತ್ತು ಹಳೇ ದ್ವೇಷದ ಹಿನ್ನೆಲೆ ಕಿರಣ್​, ಕಿಶನ್​, ಮಧು ಎಂಬಾತನನ್ನು ಸ್ನೇಹಿತರರ ಮತ್ತೊಂದು ತಂಡವೇ ಕೊಲೆ ಮಾಡಲು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ಈ ಪೈಕಿ ಮಧು ಪ್ರಾಣಪಾಯದಿಂದ ಪಾರಾಗಿದ್ದು, ಕಿರಣ್​ ಮತ್ತು ಕಿಶನ್​ ಮೃತಪಟ್ಟಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹಗಳನ್ನ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ಡಾ.ಎ.ಎನ್. ಪ್ರಕಾಶ್ ಗೌಡ, ಎಸಿಪಿ ಪೂರ್ಣಚಂದ್ರ, ಕೆ.ಆರ್. ಪೊಲೀಸ್ ಠಾಣೆ ಇನ್​​ಸ್ಪೆಕ್ಟರ್, ಶ್ವಾನದಳ, ಬೆರಳಚ್ಚು ತಂಡ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಮಾತನಾಡಿರುವ ಗಾಯಾಳು ಮಧು, ನಾನು ಮತ್ತು ಕಿರಣ್​, ಕಿಶನ್​ ಮೂವರು ಚಿಕನ್​ ಮಾಡಿಕೊಂಡು ಎಲೆ ತೋಟದ ಬಳಿ ಎಣ್ಣೆ ಪಾರ್ಸ​ಲ್​ ತೆಗೆದುಕೊಂಡು ಹೋಗಿ ಕುಡಿಯುತ್ತಿದ್ದೆವು. ಅಲ್ಲಿಗೆ ಬಂದ ಮೀಸೆ ಸ್ವಾಮಿ ಎಂಬಾತನ ಮೈದುನ ಮಾರಣಾಂತಿಕ ಹಲ್ಲೆ ಮಾಡಿದ್ದು, ಇಬ್ಬರನ್ನು ಕೊಂದ. ಜಾಗದ ವಿಚಾರವಾಗಿ ಕಿರಣ್​ ಹಾಗೂ ಸ್ವಾಮಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಿದ್ದಾನೆ ಎಂದು ತಿಳಿದುಬಂದಿದೆ. ಕೃಷ್ಣ ರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
VIDEO| ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ! ಈ ದೃಶ್ಯ ನೋಡಿದ್ರೆ ಸಿಟ್ಟು ನೆತ್ತಿಗೇರೋದು ಗ್ಯಾರಂಟಿ

ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − ten =
Remember me
