ಬೆಂಗಳೂರು:ದುರ್ಗಾ ಮಾತೆ ಮೂರ್ತಿ ವಿಸರ್ಜನೆಗೆ ಕೆರೆಗೆ ಇಳಿದ ಇಬ್ಬರು ಯುವಕರು ನಾಪತ್ತೆ ಆಗಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಬಗ್ಗೆ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜರಾಜೇಶ್ವರಿನಗರದ ಸೋಮೇಶ್ (21) ಮತ್ತು ಜಿತು (22) ನಾಪತ್ತೆ ಆದವರು.
ಮಹಾರಾಷ್ಟ್ರ ಮೂಲದ ಸೋಮೇಶ್ ಮತ್ತು ಜಿತು ರಾಜರಾಜೇಶ್ವರಿನಗರದಲ್ಲಿ ನೆಲೆಸಿದ್ದರು. ಸೆಂಟ್ರಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ದಸರಾ ನಿಮಿತ್ತ ಮನೆಯಲ್ಲಿ ದುರ್ಗಾ ಮಾತೆ ಮೂರ್ತಿ ಕೂರಿಸಿದ್ದರು. ಬುಧವಾರ ಸಂಜೆ 6 ಗಂಟೆಯಲ್ಲಿ ವಿಸರ್ಜನೆ ಮಾಡಲು ಟ್ರ್ಯಾಕ್ಟರ್‌ನಲ್ಲಿ ದುರ್ಗಾ ಮಾತೆ ಮೂರ್ತಿಯನ್ನು ಕೂರಿಸಿಕೊಂಡು ಸೋಮೇಶ್, ಜಿತು ಸೇರಿದಂತೆ 15ಕ್ಕೂ ಅಧಿಕ ಮಂದಿ ಕೆಂಗೇರಿಯ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಇರುವ ಸಾವನ್ ದರ್ಬಾರ್ ಆಶ್ರಮದ ಮುಂಭಾಗದ ಸುಣಕಲ್ ಪಾಳ್ಯ ಕೆರೆಗೆ ಬಂದಿದ್ದಾರೆ.
ಮೂರ್ತಿ ವಿಸರ್ಜನೆ ಮಾಡಲು ಐವರು ಕೆರೆಗೆ ಇಳಿದಿದ್ದು, ಮೂವರು ಮಾತ್ರ ನೀರಿಂದ ಹೊರ ಬಂದಿದ್ದಾರೆ. ಆದರೆ, ಸೋಮೇಶ್ ಮತ್ತು ಜಿತು ಹೊರಬಂದಿಲ್ಲ. ಸ್ನೇಹಿತರು ಮತ್ತು ಆಪ್ತರು ಗಾಬರಿಗೊಂಡು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ರಾತ್ರಿಯಾದ ಕಾರಣ ಕಾರ್ಯಾಚರಣೆ ಅರ್ಧಕ್ಕೆ ಕೈಬಿಟ್ಟು ಗುರುವಾರ ಬೆಳಗ್ಗೆ ಮತ್ತೆ ಶುರು ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

ನೀವು ಈ ಆ್ಯಪ್​ ಬಳಸುತ್ತಿದ್ದೀರಾ?; ಹಾಗಿದ್ದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ..​

180 ಕೆ.ಜಿ. ತೂಕದ ವ್ಯಕ್ತಿ, ಧೋಖಾ ವ್ಯಕ್ತಿತ್ವ: ಖಾಕಿ ಧರಿಸಿ ಹಣ ವಸೂಲಿ ಮಾಡ್ತಿದ್ದ ನಕಲಿ ಇನ್​ಸ್ಪೆಕ್ಟರ್ ಅರೆಸ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
