ಬೆಂಗಳೂರು: ರಾಜ್ಯದ ಮಹಿಳೆಯರಿಗೆ ನಾಲ್ಕು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ ಜಾರಿಯಾಗಿ ಆ.೧೧ ಕ್ಕೆ ಎರಡು ತಿಂಗಳಾಗಿದ್ದು, ಇದುವರೆಗೂ ೩೬.೮೨ ಕೋಟಿ ಮಹಿಳೆಯರು ಈ ಯೋಜನೆಯ ಸದುಪಯೋಗಪಡಿಸಿಕೊಂಡಿದ್ದು, ಮಹಿಳೆಯರ ಟಿಕೆಟ್‌ಗೆ 854.44 ಕೋಟಿ. ರೂ. ವೆಚ್ಚವಾಗಿದೆ.
ಜೂ.೧೧ ರಂದು ವಿಧಾನಸೌಧ ಮುಂದೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಶಕ್ತಿ ಯೋಜನೆಗೆ’ ಚಾಲನೆ ನೀಡಿದ್ದರು. ಜೂ.೧೧ ರಿಂದ ಆ.೧೦ ವರೆಗೆ ಒಟ್ಟು ೩೬,೮೨,೮೭,೪೭೫ (೩೬ ಕೋಟಿ) ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದು, ಇದಕ್ಕೆ ತಗಲಿರುವ ಟಿಕೆಟ್ ವೆಚ್ಚ ೮,೫೪,೪೪,೦೧,೨೭೬ (೮೫೪ ಕೋಟಿ) ಆಗಿದೆ. ಶಕ್ತಿ ಯೋಜನೆಯಡಿ ಜೂನ್ ತಿಂಗಳನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ ಟಿಕೆಟ್ ವೆಚ್ಚ ೭೦ ಕೋಟಿಯನ್ನು ರಾಜ್ಯ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಉಳಿದ ೭೮೪ ಕೋಟಿ ಟಿಕೆಟ್ ಮೊತ್ತವನ್ನು ರಾಜ್ಯ ಸರ್ಕಾರ ಪಾವತಿಸಬೇಕಾಗಿದೆ.
ಶಕ್ತಿ ಪಾಸ್ ವಿತರಣೆ?ಶಕ್ತಿ ಯೋಜನೆ ಯೋಜನೆ ಉದ್ಘಾಟನೆಯ ಸಮಯದಲ್ಲಿ ಸಾಂಕೇತಿಕವಾಗಿ ಕೆಲ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗಿತ್ತು. ನಂತರ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಇದೀಗ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ಬದಲಿಗೆ ಸಾಮಾನ್ಯ ಬಸ್ ಪಾಸ್‌ಗಳನ್ನು ಹೋಲುವ ಶಕ್ತಿ ಪಾಸ್‌ಗಳನ್ನು ನೀಡಲು ನಾಲ್ಕು ಸಾರಿಗೆ ನಿಗಮಗಳು ನಿರ್ಧರಿಸಿವೆ ತಿಳಿದುಬಂದಿದೆ. ಸ್ಮಾರ್ಟ್ ಕಾರ್ಡ್‌ಗಳನ್ನು ಅಭಿವೃದ್ಧಿಪಡಿಸಲು ಸಂಪರ್ಕಿಸಲಾದ ಸೆಂಟರ್ ಫಾರ್ ಇ-ಗವರ್ನನ್ಸ್ (ಸಿಇಜಿ) ಪ್ರಸ್ತಾವನೆಯನ್ನು ನಿರಾಕರಿಸಿದೆ. ಹೀಗಾಗಿ ಸಾಮಾನ್ಯ ಬಸ್‌ಪಾಸ್‌ಗಳನ್ನೇ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
