ಬೆಂಗಳೂರು: ಮಳೆಯಿಂದ ಬೆಂಗಳೂರು ನೀರಿನಲ್ಲಿ ಮುಳುಗಿದೆ. ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ.
ಆಸ್ತಿ ತೆರಿಗೆ ಏರಿಸಿ ಸಾವಿರ ಕೋಟಿಗೂ ಹೆಚ್ಚು ಸಂಗ್ರಹಿಸಿರುವ ಹಣ ಏನಾಗಿದೆ? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ. ಬೆಂಗಳೂರಿನಲ್ಲಿ ತಡ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ ರಸ್ತೆಗಳು ಕರೆಯಂತಾಗಿದ್ದು ಅಂಡರ್ ಪಾಸ್‌ಗಳಲ್ಲಿ ನೀರು ನಿಂತಿದೆ. ಹಲವು ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಡಿಸಿಎಂ ಅವರನ್ನು ತರಾಟೆ ತೆಗೆದುಕೊಂಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ. ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಳಿಗೆ, ಅಪಾರ್ಟ್‌ಮೆಂಟ್‌ಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತಿದ್ದಾರೆ. ಇನ್ನು ಬಹುತೇಕ ರಸ್ತೆಗಳು, ಅಂಡರ್ ಪಾಸ್‌ಗಳು ಸ್ವಿಮ್ಮಿಂಗ್ ಪೂಲ್ ಆಗಿವೆ. ರಸ್ತೆಗಳು ಕರೆಯಂತಾಗಿದ್ದು, ಹಳ್ಳ, ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಚಲಿಸುವುದು ವಾಹನ ಸವಾರರಿಗೆ ನರಕ ಸದೃಶ್ಯವಾಗಿದೆ. ನೀವೇನು ಮಾಡುತ್ತಿದ್ದೀರಿ ಎಂದು ಕೆಣಕಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡಲು ನೀವು ತೋರಿದ ಉತ್ಸಾಹ, ಈಗ ಎಲ್ಲಿ? ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಬರೀ ಸುಳ್ಳುಗಳನ್ನು ಹೇಳುತ್ತಲೇ ಬೆಂಗಳೂರಿನ ಜನರಿಗೆ ಮಂಕುಬೂದಿ ಎರಚುತ್ತಿದ್ದೀರಿ ಅಷ್ಟೇ. ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲೇ ಮುಳುಗಿರುವಾಗ ಜನಸಮಾನ್ಯರ ಬಗ್ಗೆ ಯೋಚಿಸಲು ನಿಮಗೆ ಸಮಯ ಎಲ್ಲಿದೆ? ಎಂದು ಜೆಡಿಎಸ್ ಕಿಡಿಕಾರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
