ಉಡುಪಿ:ನಟ ಅರ್ಜುನ್ ಸರ್ಜಾ ತಮಿಳುನಾಡಿನ ಚೆನ್ನೈನಲ್ಲಿ ಶ್ರೀರಾಮ ಮತ್ತು ಆಂಜನೇಯನ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದು, ಎರಡು ದಿನಗಳಿಂದ ನಡೆಯುತ್ತಿರುವ ದೇಗುಲದ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಪ್ರಕ್ರಿಯೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದಾರೆ.
ಅಯೋಧ್ಯೆ ಪ್ರವಾಸದಲ್ಲಿದ್ದ ಪೇಜಾವರ ಶ್ರೀಗಳನ್ನು ಅರ್ಜುನ್ ಸರ್ಜಾ ತಮಿಳುನಾಡಿಗೆ ಕರೆಸಿ ದೇವರಿಗೆ ಕುಂಬಾಭಿಷೇಕ ಮಾಡಿಸಿದ್ದಾರೆ. ಎರಡು ದಿನಗಳ ಕಾಲ ನಡೆದ ಧಾರ್ಮಿಕ ವಿಧಿ-ವಿಧಾನದಲ್ಲಿ ಅವಧೂತ ವಿನಯ್ ಗುರೂಜಿ ಕೂಡ ಪಾಲ್ಗೊಂಡಿದ್ದರು.
ಪೇಜಾವರ ಸ್ವಾಮೀಜಿ ಭಗವಾನ್ ಆಂಜನೇಯ ದೇವರ ಬೃಹತ್ ವಿಗ್ರಹಕ್ಕೆ ಜೇನು, ತುಪ್ಪ ಸಕ್ಕರೆಯ, ಅಭಿಷೇಕವನ್ನು ಮಾಡಿಸಿ, ಪ್ರಾರ್ಥನೆ ಜೊತೆ ಹೂವಿನ ಪಕಳಗಳ ಅಭಿಷೇಕಗೈದರು. ಚೆನ್ನೈನಲ್ಲಿ ಪೇಜಾವರ ಮಠದ ಶಾಖೆ ಇದೆ. ಸರ್ಜಾ ಕುಟುಂಬ ವಿಶ್ವೇಶತೀರ್ಥರ ಕಾಲದಿಂದಲೂ ಪೇಜಾವರ ಮಠದ ಜೊತೆ ಸಂಬಂಧ ಹೊಂದಿದೆ.
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಯವಾಗಲಿ: ಅಭಿಮಾನಿಗಳ ಘೋಷಣೆ

ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಷ್!

ಪರಿಶಿಷ್ಟರ ಹಣ ಬೇರೆಯದಕ್ಕೆ ಬಳಸಿಲ್ಲ : ಸಿಎಂ ಯಡಿಯೂರಪ್ಪ

Sign in to your account
Please enter an answer in digits:11 + 20 =
Remember me
