ಉಡುಪಿ:ಉಡುಪಿ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ಹೆಣ್ಣುಮಕ್ಕಳು ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಪ್ರಕರಣ ರಾಜ್ಯಾದ್ಯಂತ ವಿವಾದ ಹುಟ್ಟಿಸಿ ಹಾಕಿದೆ. ಈ ಪ್ರಕರಣದ ವಿಚಾರವಾಗಿ ತನಿಖೆ ಮಾಡಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬಂದು ಹೇಳಿಕೆ ನೀಡಿದ್ದೂ ವಿವಾದಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ:ಎಲ್ಲರೂ ಬೇಲಿ ಹಾರುತ್ತಿದ್ದಾರೆ ಎಂದ ಖುಷ್​​ಬೂ; ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಹೀಗಂದಿದ್ದೇಕೆ?
ಇದೀಗ ಹೊಸ ತನಿಖಾ ತಂಡ ರಚಿಸಿ ತನಿಖೆ ನಡೆಸುವ ಸಾಧ್ಯತೆ ಕಂಡು ಬರುತ್ತಿದ್ದು ಈ ತಂಡದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಹೊಸ ತಂಡ ರಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಉಡುಪಿಯ ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು
ಜಾಮೀನು ಮಂಜೂರಾದರು ಪೊಲೀಸರ ತನಿಖೆ ಇನ್ನು ಶುರುವಾಗಿಲ್ಲ. ಅದಲ್ಲದೇ ಮಲ್ಪೆ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆಗೆ ನಿರ್ಲಕ್ಷ ತೋರಿಸಿದ್ದಾರೆ ಎನ್ನುವ ಆರೋಪವೂ ಇದ್ದು ಇನ್ಸ್ಪೆಕ್ಟರ್ ಮಂಜುನಾಥ ಗೌಡ ವಿರುದ್ಧ ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಪೊಲೀಸರು ವೀಕ್ ಸೆಕ್ಷನ್​ಗಳನ್ನು ಹಾಕಿ ಪ್ರಕರಣವನ್ನು ಹಳ್ಳ ಹಿಡಿಸಿದ್ದಾರೆ ಎನ್ನುವ ಆರೋಪವೂ ಇದೆ.
ಇದನ್ನೂ ಓದಿ:ಉಡುಪಿ ಹಾಸ್ಟೆಲ್​ ಟಾಯ್ಲೆಟ್​​ನಲ್ಲಿ ವಿಡಿಯೋ ಪ್ರಕರಣ: ಡಿಸಿ-ಎಸ್​ಪಿ ಜತೆ ಖುಷ್​ಬೂ ಸುದೀರ್ಘ ಸಭೆ ಮುಕ್ತಾಯ; ಇಲ್ಲಿದೆ ವಿವರ..
ಸದ್ಯ ಇರುವ ತನಿಖಾ ತಂಡ, ತನಿಖಾಧಿಕಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದ್ದು ಹೊಸ ತನಿಖಾ ತಂಡ ರಚಿಸುವಂತೆ ಆಗ್ರಹವೂ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಹೊಸ ತನಿಖಾ ತಂಡದ ರಚನೆಗೆ ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − nine =
Remember me
