ಉಡುಪಿ:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಸದ್ದು ಮಾಡುತ್ತಿರುವ ಉಡುಪಿಯ ಕಾಲೇಜೊಂದರ ಹಾಸ್ಟೆಲ್ ಟಾಯ್ಲೆಟ್​ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ಹಾಸ್ಟೆಲ್​ನ ಟಾಯ್ಲೆಟ್​​ನಲ್ಲಿ ಮೊಬೈಲ್​ಫೋನ್ ಇಟ್ಟು ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬಂದಾಗಿನಿಂದ ಭಾರಿ ಸಂಚಲನ ಸೃಷ್ಟಿಸಿದೆ. ಜುಲೈ 18ರಂದು ನಡೆದಿದ್ದ ಈ ಘಟನೆ ಸಂಬಂಧ ಜುಲೈ 26ರಂದು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದು ವಿದ್ಯಾರ್ಥಿನಿಯ ಚಿತ್ರೀಕರಣ ನಡೆದಿದ್ದರಿಂದ ಎಬಿವಿಪಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳವರು ಪ್ರತಿಭಟನೆ ನಡೆಸಿದ್ದರು. ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.
ಇದನ್ನೂ ಓದಿ:ರಾಜಧಾನಿ ಬೆಂಗಳೂರಲ್ಲೇ ನಡೆಯಲಿದೆ ಕಂಬಳ!; ನೋಡಿ.. ಇಲ್ಲಿದೆ ವಿವರ..
ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣವನ್ನು ಸರ್ಕಾರ ಇಂದು ಸಿಐಡಿಗೆ ಹಸ್ತಾಂತರ ಮಾಡಿದೆ. ‘ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪತ್ನಿಯ ಸ್ಮರಣಾರ್ಥ ದೇವಸ್ಥಾನ ನಿರ್ಮಿಸಿ ಆಕೆಯ ಮೂರ್ತಿಗೆ ನಿತ್ಯವೂ ಪೂಜೆ ಸಲ್ಲಿಸುತ್ತಿರುವ ಪತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
