ಉಡುಪಿ:ಯುವತಿ ರಕ್ಷಿತಾ ನಾಯಕ್ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರ ಪ್ರಶಾಂತ್​ ಕುಂದರ್​ನನ್ನು ಉಡುಪಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು ‌ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲಯಲ್ಲಿ ಆತನನ್ನು ಬಂಧಿಸಲಾಗಿದೆ. ಆರೋಪಿ ಪ್ರಶಾಂತ್​ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ:VIDEO| ಇನ್ನೇನು ತಾಳಿ ಕಟ್ಟಬೇಕು ಅಷ್ಟರಲ್ಲಿ ವಧು ಹೇಳಿದ ಮಾತು ಕೇಳಿ ವರನಿಗೆ ಬಿಗ್​ ಶಾಕ್​!
ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿ, ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಗ್ರಾಮದ ರಕ್ಷಿತಾ ನಾಯಕ್​, ಅ.24ರ ರಾತ್ರಿ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಅಂದು ಸಂಜೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆತಂದ ಪ್ರಶಾಂತ್ ಕುಂದರ್‌, ಆಸ್ಪತ್ರೆಯ ಸ್ಟ್ರೆಚ್ಚರ್​ಗೆ ಹಾಕಿ ಎಸ್ಕೇಪ್​ ಆಗಿದ್ದ. ಇದಾದ ಕೆಲವೇ ಕ್ಷಣದಲ್ಲಿ ಯುವತಿ ಮೃತಪಟ್ಟಿದ್ದಳು. ಆಕೆಯ ಪಾಲಕರಿಗೂ ಆತನೇ ಕರೆ ಮಾಡಿ ವಿಷಯ ತಿಳಿಸಿದ್ದ. ಬಳಿಕ ಫೋನ್​ ಸ್ವಿಚ್ಡ್​ ಆಫ್​ ಮಾಡಿಕೊಂಡಿದ್ದ.
ಮಗಳು ರಕ್ಷಿತಾಳ ಸಾವು ಅನುಮಾನಾಸ್ಪದ ಎಂದು ಪಾಲಕರು ದೂರು ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಪ್ರಶಾಂತ್​ ಕುಂದರ್​ನನ್ನು ಕಳೆದ ಸೋಮವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಬಂಧಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಉಡುಪಿ ಯುವತಿ ಅನುಮಾನಾಸ್ಪದ ಸಾವು ಪ್ರಕರಣ: ಕಾಲ್​ ರೆಕಾರ್ಡ್ಸ್​ನಲ್ಲಿ ಸ್ಫೋಟಕ ಮಾಹಿತಿ..!

ಉಡುಪಿ ಯುವತಿ ಅನುಮಾನಾಸ್ಪದ ಸಾವು: ಕೊನೆಗೂ ಸಿಕ್ಕಿಬಿದ್ದ ಪ್ರಿಯಕರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
