ಉಡುಪಿ:ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಆಕೆ ಸಾಯುವ ಮುನ್ನವೇ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿ, ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಗ್ರಾಮದ ರಕ್ಷಿತಾ ನಾಯಕ್​, ಅ.24ರ ರಾತ್ರಿ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಅಂದು ಸಂಜೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆತಂದ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್‌, ಆಸ್ಪತ್ರೆಯ ಸ್ಟ್ರೆಚ್ಚರ್​ಗೆ ಹಾಕಿ ಎಸ್ಕೇಪ್​ ಆಗಿದ್ದ. ಇದಾದ ಕೆಲವೇ ಕ್ಷಣದಲ್ಲಿ ಯುವತಿ ಮೃತಪಟ್ಟಿದ್ದಳು. ಆಕೆಯ ಪಾಲಕರಿಗೂ ಆತನೇ ಕರೆ ಮಾಡಿ ವಿಷಯ ತಿಳಿಸಿದ್ದ. ಬಳಿಕ ಫೋನ್​ ಸ್ವಿಚ್ಡ್​ ಆಫ್​ ಮಾಡಿಕೊಂಡಿದ್ದ.
ಮಗಳು ರಕ್ಷಿತಾಳ ಸಾವು ಅನುಮಾನಾಸ್ಪದ ಎಂದು ಪಾಲಕರು ದೂರು ದಾಖಲಿಸಿದ್ದಾರೆ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಪ್ರಶಾಂತ್​ ಕುಂದರ್​ನನ್ನು ಸೋಮವಾರ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಭಾನುವಾರ ರಾತ್ರಿ ರಕ್ಷಿತಾಳ ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಬಂದ ಬಳಿಕ ಸಾವು ಕೊಲೆಯೋ/ಆತ್ಮಹತ್ಯೆಯೋ ಎಂಬುದು ತಿಳಿಯಲಿದೆ. ರಕ್ಷಿತಾಳ ದೇಹದಲ್ಲಿ ಆಲ್ಕೋಹಾಲ್ ಅಂಶ, ಕುತ್ತಿಗೆ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ ಗಾಯಗಳು ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿ ಪ್ರಶಾಂತ್​ ಕುಂದರ್​ ರಕ್ಷಿತಾಳ ಪ್ರಿಯಕರ. ಆತನಿಗೆ ಈಗಾಗಲೇ ಮದುವೆ ಆಗಿದ್ದರೂ ರಕ್ಷಿತಾಳನ್ನು ಪ್ರೀತಿಬಲೆಗೆ ಬೀಳಿಸಿಕೊಂಡಿದ್ದ ಎಂದು ಗೊತ್ತಾಗಿದೆ. ಆದ್ರೆ ಸಾವಿನ ರಹಸ್ಯ ಇನ್ನೂ ಬಯಲಾಗಿಲ್ಲ.
ಇಬ್ಬರು ಪತ್ನಿಯರೊಂದಿಗಿನ ಕಾಮದಾಟದ ಲೈವ್​ ದೃಶ್ಯವನ್ನೇ ಮಾರಾಟಕ್ಕಿಟ್ಟ 24ರ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 12 =
Remember me
