ಉಡುಪಿ:ಜಿಲ್ಲೆಯ ಇತಿಹಾಸದಲ್ಲಿ ಮೊದಲ ಭಾರಿಗೆ ಭಾರಿ ನೆರೆ ಹಾವಳಿಯಿಂದ ಉಡುಪಿ ನಗರದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಕೃತಕ‌ ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಬಂದ್ ಆಗಿದೆ. ಅಂಬಲಪಾಡಿ, ಮಠದ ಬೆಟ್ಟು, ಗುಂಡಿಬೈಲು, ಬನ್ನಂಜೆ,‌ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ವಿಜಯವಾಣಿಗೆ ತಿಳಿಸಿದ್ದಾರೆ.
ಉಡುಪಿ ಪೊಲೀಸರು, ಅಗ್ನಿಶಾಮಕ ದಳ ತಡರಾತ್ರಿಯಿಂದ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಉಡುಪಿಗೆ ಎನ್ ಡಿ ಆರ್ ಎಫ್ ಪಡೆಯನ್ನು ಕರೆಸಿಕೊಳ್ಳಲಾಗುತ್ತಿದೆ. ನೆರೆ ಸಂಕಷ್ಟದಲ್ಲಿ ಸಿಲುಕಿದ್ದರೆ ರಕ್ಷಣೆಗೆ ಸಾರ್ವಜನಿಕರು ತುರ್ತು 1077 ಕಂಟ್ರೋಲ್ ರೂಂ ಗೆ ಸಂಪರ್ಕಿಸಲು ಡಿಸಿ ಕೋರಿದ್ದಾರೆ.
ಇದನ್ನೂ ಓದಿ:ಇಂಜಿನಿಯರ್​ ವಿದ್ಯಾರ್ಥಿಗಳಿಂದ ಕಡಿಮೆ ವೆಚ್ಚದ ಇ-ಬೈಕ್​ ಸಂಶೋಧನೆ: ಗಂಟೆಗೆ ಎಷ್ಟು ಕಿ.ಮೀ ಚಲಿಸಬಲ್ಲದು?
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜನತೆ ಭಾನುವಾರ ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ನೆರೆಯಿಂದ ಬೆಚ್ಚಿ ಬಿದ್ದಿದ್ದಾರೆ . ಜನಜೀವನ ಅಸ್ತವ್ಯಸ್ಥಗೊಂಡಿದ್ದು. ಉಡುಪಿ ನಗರ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ.
ಭೀಕರ ಮಳೆಯ ಪರಿಣಾಮ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣ, ನಗರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು. ನಗರದ ಅಂಗಡಿ ಗೋದಾಮುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಭಾರಿಯ ಮಳೆಯ ಪರಿಣಾಮ ಸ್ವರ್ಣ, ಸೀತನದಿ ಉಕ್ಕಿ ಹರಿಯುತ್ತಿದೆ.
ಭಾರಿ ಮಳೆಗೆ ತತ್ತರಿಸಿದ ಉಡುಪಿ, ಹಲವು ಮನೆಗಳು ಜಲಾವೃತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
