ಬೆಳಗಾವಿ:ನವೆಂಬರ್ 12ರಂದು ಉಡುಪಿಯ ನೇಜಾರಿನಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್​ ಅರುಣ್​ ಚೌಗಲೆ ಎಂದು ಗುರುತಿಸಲಾಗಿದ್ದು, ಈತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು
ಉಡುಪಿಯ ನೇಜಾರಿನಲ್ಲಿ ಹಸೀನಾ (48), ಅಫ್ನಾನ್​ (23), ಅಯ್ನಾಜ್ (20), ಅಸೀಮ್ (20) ಅವರನ್ನು ಚೂರಿಯಿಂದ ಭೀಕರವಾಗಿ ಇರಿದು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಬಳಿಕ ಬೆಳಗಾವಿಯ ಕುಡಚಿಯಲ್ಲಿರುವ ಸಂಬಂಧಿಕರೊಬ್ಬರ ಮನೆಯಲ್ಲಿ ಅವಿತು ಕುಳಿತಿದ್ದ. ಮೊಬೈಲ್​ ಲೊಕೇಷನ್​ ಆಧರಿಸಿ ಆರೋಪಿಯ ಜಾಡು ಹಿಡಿಯುವಲ್ಲಿ ಯಶಸ್ವಿಯಾದ ಉಡುಪಿ ಪೊಲೀಸರು ಹಂತಕನನ್ನು ಬಂಧಿಸಿದ್ದಾರೆ.
ಯಾವ ಕಾರಣಕ್ಕೆ ಕೊಲೆ ಮಾಡಲಾಗಿತ್ತು ಎಂಬ ಕಾರಣ ಈವರೆಗೂ ತಿಳಿದು ಬಂದಿಲ್ಲ. ಹಂತಕನನ್ನು ಉಡುಪಿಗೆ ಕರೆತರುತ್ತಿರುವ ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸುವ ಸಾಧ್ಯತೆ ಇದೇ ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 17 =
Remember me
