ಉಡುಪಿ:ನಗರದಲ್ಲಿ ವಯಸ್ಸಾದ ಒಂಟಿ ಮಹಿಳೆ, ಪುರುಷರನ್ನು ಗುರಿಯಾಗಿಸಿ ಸುಲಿಗೆ ನಡೆಸುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ಅಂತರ್ ರಾಜ್ಯ ವಂಚಕರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 7ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಮಪುರ ನಿವಾಸಿಗಳಾದ ಜಾಕೀರ್ ಹುಸೇನ್ (26), ಕಂಬರ್ ರಹೀಂ ಮಿರ್ಜಾ (32), ಅಕ್ಷಯ್ ಸಂಜಯ್ ಗೋಸಾವಿ (22) ಮತ್ತು ಶಾಹರುಖ್ ಬಂದೆನವಾಜ್ ಶೇಖ್ (24) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರು ದಿಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ವಯಸ್ಸಾದ ಒಂಟಿ ಮಹಿಳೆಯರು ಅಥವಾ ಗಂಡಸರು ನಡೆದುಕೊಂಡು ಹೋಗುವಾಗ ಅವರಿಗೆ ನಾವು ಪೊಲೀಸರು, ಮುಂದೆ ಗಲಾಟೆ ಆಗಿದೆ, ಚಿನ್ನಾಭರಣ ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ತೆಗೆದು ಬ್ಯಾಗಿನಲ್ಲಿ ಹಾಕಿಕೊಡುವುದಾಗಿ ನಂಬಿಸಿ, ಅವರಿಗೆ ತಿಳಿಯದಂತೆ ಚಿನ್ನಾಭರಣವನ್ನು ಮೋಸದಿಂದ ಲಪಟಾಯಿಸಿದ್ದಾರೆ. ತನಿಖೆ ವೇಳೆ ಆರೋಪಿಗಳು ನಡೆಸಿದ ಕೃತ್ಯಗಳಲ್ಲಿ ಉಡುಪಿ ನಗರ -1, ಕುಂದಾಪುರ -1, ವಿಜಯಪುರದಲ್ಲಿ 4, ಚಿಕ್ಕಮಗಳೂರಿನಲ್ಲಿ 1, ಬಂಟ್ವಾಳದಲ್ಲಿ 1, ಮಂಗಳೂರು ಉರ್ವಾ ಪೊಲೀಸ್ ಠಾಣೆಯಲ್ಲಿ 1 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ. ಇನ್ನೂ ಹಲವಾರು ಕಡೆಗಳಲ್ಲಿ ಇದೇ ರೀತಿ ಕೃತ್ಯಗಳನ್ನು ನಡೆಸಿದ್ದಾರೆ.
ಇದನ್ನೂ ಓದಿ:‘ನಟ ಸುರೇಂದ್ರ ಬಂಟ್ವಾಳ್​ನನ್ನು ನಾನೇ ಕೊಂದೆ… ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ’
ಉಡುಪಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಬಳಿ ಅಕ್ಟೊಬರ್ 14ರಂದು ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್. ಅವರು ಖಚಿತ ಮಾಹಿತಿಯಾಧಾರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸುವ ವೇಳೆ ಆರೋಪಿಗಳಲ್ಲಿ ಮಂಗಳೂರಿನಲ್ಲಿ ನಡೆಸಿದ ಕೃತ್ಯದ 12 ಗ್ರಾಂ ತೂಕದ ಚಿನ್ನದ ಚೈನ್ ಯಥಾಸ್ಥಿತಿಯಲ್ಲಿತ್ತು. ಕೃತ್ಯಕ್ಕೆ ಬಳಸಿದ ಚಾವರ್‌ಲೆಟ್ ಬೀಟ್ ಕಾರು ಮತ್ತು ಹೊಂಡಾ ಶೈನ್ ಬೈಕ್ ಹಾಗೂ 2 ಹೆಲ್ಮೆಟ್ ಮತ್ತು 5,100 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಬಳಿಕ ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆದುಕೊಂಡು, ಇವರು ಮೋಸ ಮಾಡಿ ತೆಗೆದುಕೊಂಡಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿದ್ದ ಮಹಾರಾಷ್ಟ್ರ ರಾಜ್ಯದ ಅಹ್ಮದ್ ನಗರದ ಶ್ರೀರಾಮ್‌ಪುರ ಎಂಬಲ್ಲಿನ ಚಿನ್ನದ ಅಂಗಡಿಯಿಂದ 65 ಗ್ರಾಂ ಚಿನ್ನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 7ಲಕ್ಷ ರೂ. ಆಗಬಹುದೆಂದು ಅಂದಾಜಿಸಲಾಗಿದೆ.
ಕೊಹ್ಲಿ ಕಂಡ್ರೆ ಉರಿದು ಬೀಳ್ತಿದ್ದ ಗೌತಿ ಈಗ ವಿರಾಟ್​ ಬಗ್ಗೆ ಹೇಳಿದ್ದನ್ನು ಕೇಳಿದ್ರೆ ಹೆಮ್ಮೆ ಪಡ್ತೀರಾ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 11 =
Remember me
